ಟರ್ಕಿಯಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪನ…

67
firstsuddi

ಇಸ್ತಾಂಬುಲ್ : ದಕ್ಷಿಣ ಟರ್ಕಿಯ ಗಾಜಿಯಾಂಟೆಪ್ ಬಳಿ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.

ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಗಜಿಯಾಂಟೆಪ್ ಪ್ರಾಂತ್ಯದ ನೂರ್ಡಗಿ ನಗರದ ಪೂರ್ವಕ್ಕೆ 26 ಕಿಮೀ ದೂರದಲ್ಲಿ 17.9 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಟರ್ಕಿಯಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಹತ್ತಾರು ಕಟ್ಟಡಗಳು ಉರುಳಿ 15ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಟರ್ಕಿಯ ಒಸ್ಮಾನಿಯಾ ಪ್ರಾಂತ್ಯದಲ್ಲಿ ಐವರು ಮೃತಪಟ್ಟಿದ್ದು, 34 ಕಟ್ಟಡಗಳು ಕುಸಿದಿವೆ. ಟರ್ಕಿಯ ಮೇಯರ್ ಸ್ಯಾನ್ಲಿಯುರ್ಫಾದಲ್ಲಿ ಐವರು ಮೃತಪಟ್ಟಿದ್ದಾರೆ. ಮತ್ತು ಈ ಪ್ರದೇಶದಲ್ಲಿ 16 ಕಟ್ಟಡಗಳು ಕುಸಿದಿವೆ.

ಮೂರು ವರ್ಷಗಳ ಹಿಂದೆ(2020)ಟರ್ಕಿಯಲ್ಲಿ ಸಂಭವಿಸಿದ್ದ 6.8 ತೀವ್ರತೆಯ ಪ್ರಬಲ ಭೂಕಂಪನದಲ್ಲಿ 40ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು.