ಪ್ಲಾಸ್ಟಿಕ್ ಬಾಟಲಿಗಳಿಂದ ತಯಾರಿಸಿದ ಜಾಕೆಟ್ ಧರಿಸಿ ಸದನಕ್ಕೆ ಬಂದ ಪ್ರಧಾನಿ ಮೋದಿ.

69
firstsuddi

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿಗೆ ಪ್ಲಾಸ್ಟಿಕ್ ಬಾಟಲಿಗಳಿಂದ ಮರುಬಳಕೆ ಮಾಡಿದ ವಸ್ತುಗಳಿಂದ ತಯಾರಿಸಿದ ವಿಶೇಷ ಜಾಕೆಟ್ ಧರಿಸಿ ಬಂದಿದ್ದರು.

ಸೋಮವಾರ ಮೋದಿ ಬೆಂಗಳೂರಿಗೆ ಬಂದಿದ್ದಾಗ ಜಾಕೆಟ್ ಅನ್ನು ಉಡುಗೊರೆಯಾಗಿ ನೀಡಲಾಗಿತ್ತು. ಇಂದು ರಾಜ್ಯಸಭೆಯಲ್ಲಿ ತಿಳಿ ನೀಲಿ ಬಣ್ಣದ ಸದ್ರಿ ಹಾಫ್ ಜಾಕೆಟ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಬೆಂಗಳೂರಿನ ಮಾದವಾರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಿದ್ದ ಭಾರತ ಇಂಧನ ಸಪ್ತಾಹ-2023ಕ್ಕೆ ಫೆ. 6ರಂದು ಪ್ರಧಾನಿ ಮೋದಿ ಚಾಲನೆ ನೀಡಿದ್ದರು.

ಈ ಸಂದರ್ಭದಲ್ಲಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ (ಐಒಸಿ) ತಯಾರಿಸಿರುವ ಸೌರಶಕ್ತಿ ಆಧಾರಿತ ಕುಕ್ ಟಾಪ್ ಹಾಗೂ ಬಳಸಿದ ಪ್ಲಾಸ್ಟಿಕ್ ಬಾಟಲಿಗಳಿಂದ ತಯಾರಿಸಿರುವ ವಸ್ತ್ರಗಳನ್ನು ಬಿಡುಗಡೆ ಮಾಡಿದ್ದರು. ಈ ಸಮಾರಂಭದಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಈ ಜಾಕೆಟ್ ಅನ್ನು ಪ್ರಧಾನಿ ಅವರಿಗೆ ಉಡುಗೊರೆಯಾಗಿ ನೀಡಿತ್ತು.