ಆನೇಕಲ್ : ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆಯ ಸೇಂಟ್ ಫಿಲೋಮಿನಾ ಶಾಲೆಯಲ್ಲಿ ನಿನ್ನೆ ಸಂಜೆ ನಡೆದಿದೆ.
ಶಾಲೆಯಲ್ಲಿ ಆಯೋಜನೆ ಮಾಡಿದ್ದ ಕಬಡ್ಡಿ ಪಂದ್ಯಾವಳಿ ವೇಳೆ ರೈಡ್ ಗೆ ಹೋಗಿದ್ದ 19 ವರ್ಷದ ವಿದ್ಯಾರ್ಥಿನಿ ಸಂಗೀತಾಳಿಗೆ ಹೃದಯಘಾತವಾಗಿದೆ. ತಕ್ಷಣ ಆಕೆಯನ್ನು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ಸಂಗೀತಾ ಸಾವನ್ನಪ್ಪಿದ್ದಾಳೆ.
ಸಂಗೀತಾ ಧಾರವಾಡ ಮೂಲದವಳಾಗಿದ್ದು ಆನೇಕಲ್ ತಾಲೂಕಿನ ಬಳಗಾರನಹಳ್ಳಿಯಲ್ಲಿ ವಾಸವಿದ್ದರು ಎನ್ನಲಾಗ್ತಿದೆ. ಘಟನೆ ಸಂಬಂಧ ಅತ್ತಿಬೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ವಿದ್ಯಾರ್ಥಿನಿ ಸಾವನ್ನಪ್ಪಿರುವ ಹಿನ್ನೆಲೆ ಸೇಂಟ್ ಫಿಲೋಮಿನಾ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.










