ಬಿಡಿಎ ಕಚೇರಿ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ…

38
firstsuddi

ಬೆಂಗಳೂರು: ನಗರದ ವೈಯಾಲಿಕಾವಲ್ ನಲ್ಲಿರುವ ಬಿಡಿಎ ಕಚೇರಿ ಮೇಲೆ ಲೋಕಾಯುಕ್ತ ಎಸ್ ಪಿ ಅಶೋಕ್ ನೇತೃತ್ವದಲ್ಲಿನ ಆರು ತಂಡ ಏಕಕಾಲಕ್ಕೆ ದಾಳಿ ನಡೆಸಿದೆ.

ಕಾರ್ನರ್ ಸೈಟ್ ಹಂಚಿಕೆ ಹಾಗೂ ಲೇಔಟ್ ನಿರ್ಮಾಣ ಪ್ರಕ್ರಿಯೆಯಲ್ಲಿ ಬಿಡಿಎ ವಿರುದ್ಧ ಸಾಕಷ್ಟು ಅವ್ಯವಹಾರದ ಆರೋಪ ಕೇಳಿಬಂದಿತ್ತು. ಪರಿಹಾರ ನೀಡುವಲ್ಲೂ ವ್ಯಾಪಕ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

35ಕ್ಕೂ ಹೆಚ್ಚು ಲೋಕಾಯುಕ್ತರು ಅಧಿಕಾರಿಗಳು ಕಚೇರಿಯ ನಾಲ್ಕು ಬಾಗಿಲು ಮುಚ್ಚಿ ದಾಖಲೆ ಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕಚೇರಿ ಒಳಗಿದ್ದ ಪ್ರತಿಯೊಬ್ಬರನ್ನು ತಪಾಸಣೆ ಮಾಡಿ ಹೊರಗೆ ಬಿಡಲಾಗುತ್ತಿದೆ. ಕಚೇರಿ ಆವರಣದಲ್ಲೂ ಟೇಬಲ್ ಹಾಕಿಕೊಂಡು ಕುಳಿತ ಅಧಿಕಾರಿಗಳು, ಸಾರ್ವಜನಿಕರಿಂದ ದೂರು ಸ್ವೀಕರಿಸುತ್ತಿದ್ದಾರೆ.