ಬೆಂಗಳೂರು: ಮೈಸೂರು- ಬೆಂಗಳೂರು ದಶಪಥ ರಸ್ತೆ ಕಾಮಗಾರಿಗೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ವಂದೇ ಭಾರತ್ ಎಕ್ಸ್ಪ್ರೆಸ್ ಹಾಗೂ ಮೈಸೂರು – ಬೆಂಗಳೂರು ದಶಪಥ ರಸ್ತೆಯ ವಿಡಿಯೋಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಕರ್ನಾಟಕದಲ್ಲಿ ವಿಶ್ವದರ್ಜೆಯ ಮೂಲ ಸೌಕರ್ಯ ಹಾಗೂ ಬೆಳವಣಿಗೆಯ ಅದ್ಭುತ ದೃಶ್ಯ. ಡಬಲ್ ಇಂಜಿನ್ ಸರ್ಕಾರ ರಾಜ್ಯದಲ್ಲಿ ಚಮತ್ಕಾರ ಮಾಡಿದೆ ಎಂದು ಬೊಮ್ಮಾಯಿ ವಿಡಿಯೋದೊಂದಿಗೆ ಟ್ವೀಟ್ ಮಾಡಿದ್ದಾರೆ. ಸಿಎಂ ಅವರ ಈ ಟ್ವೀಟ್ ಅನ್ನು ಮೋದಿ ರೀ ಟ್ವೀಟ್ ಮಾಡಿದ್ದು, ನಮ್ಮ ಜನರಿಗೆ ಉತ್ತಮ ಮೂಲಭೂತ ಸೌಕರ್ಯದ ಅವಶ್ಯಕತೆಯಿದೆ, ಅದನ್ನು ಒದಗಿಸಲು ನಮ್ಮ ಸರ್ಕಾರ ಯಾವಾಗಲೂ ಶ್ರಮಿಸುತ್ತದೆ. ನಮ್ಮ ಉತ್ತಮ ಮೂಲಭೂತ ಸೌಕರ್ಯದ ಯೋಜನೆಗಳು ವ್ಯಾಪಕವಾಗಿ ಶ್ಲಾಘಿಸಲ್ಪಟ್ಟಿದೆ ಎಂದು ಪ್ರಶಂಸಿಸಿದ್ದಾರೆ.
Our people deserve the best possible infrastructure, which our Government will always work hard to provide. Our strides in infra creation have been widely lauded. https://t.co/3MStIKTnSF
— Narendra Modi (@narendramodi) February 11, 2023










