‘ಕಾಂತಾರ’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗೆಲ್ಲಲು ಅಸಲಿ ಕಾರಣ ತಿಳಿಸಿದ ರಿಷಬ್ ಶೆಟ್ಟಿ.

58
firstsuddi

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ `ಕಾಂತಾರ’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಿಟ್ ಆಗಿದೆ. 400 ಕೋಟಿ ರೂಪಾಯಿಗಿಂತ ಅಧಿಕ ಗಳಿಕೆ ಮಾಡಿದೆ. ಈ ಸಿನಿಮಾಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಯಶಸ್ಸು ಸಿಗಲು ಯಾರು ಕಾರಣ ಏನು ಎಂಬುದನ್ನು ರಿವೀಲ್ ಮಾಡಿದ್ದಾರೆ.

ಇಂದು ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘದ ವತಿಯಿಂದ ಮಾಧ್ಯಮ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಕಾಂತಾರ ಕಥೆ ಹುಟ್ಟಿದ್ದು ಹೇಗೆ? ಈ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗೆಲ್ಲಲು ಕಾರಣವೇನು? ಎಂಬುದರ ಬಗ್ಗೆ ಮಾತನಾಡಿದ್ದಾರೆ.

ಈ ಚಿತ್ರದ ಕಥೆ ಹುಟ್ಟಿದ್ದು 2021ರ ಏಪ್ರಿಲ್ ತಿಂಗಳಲ್ಲಿ. ಲಾಕ್ ಡೌನ್ ನಲ್ಲಿ ನಾನು ಊರಿನಲ್ಲಿದ್ದೆ. ಆಗ ‘ಕಾಂತಾರ’ ಸಿನಿಮಾದ ಕಥೆ ಹುಟ್ಟಿತ್ತು. ನಾನು ಸಾವಯವ ಕೃಷಿ ಮಾಡುವ ಆಲೋಚನೆಯಲ್ಲಿದ್ದೆ. ಇದಕ್ಕಾಗಿ ಮಾಹಿತಿ ಪಡೆಯಲು ಹೋಗಿದ್ದೆ. ಅಲ್ಲಿ ಕಾಡು ಪ್ರಾಣಿ ಹೊಡೆಯುವ ಬಗ್ಗೆ ಚರ್ಚೆ ನಡೆಯುತ್ತಿತ್ತು. ಫಾರೆಸ್ಟ್ ಇಲಾಖೆಯವರು ಅಲ್ಲಿ ರೈಡ್ ಮಾಡಿದರು. ಇದರಿಂದ ‘ಕಾಂತಾರ’ ಚಿತ್ರದ ಕಥೆ ಹುಟ್ಟಿತು ಎಂದಿದ್ದಾರೆ ರಿಷಬ್ ಶೆಟ್ಟಿ.

‘ಕೆಜಿಎಫ್ 2’ ಚಿತ್ರವನ್ನು ನಿರ್ಮಾಣ ಮಾಡಿದ್ದು ಹೊಂಬಾಳೆ ಫಿಲ್ಮ್ಸ್. ಈ ಚಿತ್ರ ಯಶಸ್ಸು ಕಂಡಿದ್ದರಿಂದ ಹೊಂಬಾಳೆ ಫಿಲ್ಮ್ಸ್ ಖ್ಯಾತಿ ರಾಷ್ಟ್ರ ಮಟ್ಟದಲ್ಲಿ ಹಬ್ಬಿತು. ಇದು ‘ಕಾಂತಾರ’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಯಶಸ್ಸು ಕಾಣಲು ಸಹಕಾರಿ ಆಯಿತು. ‘ಕಾಂತಾರ’ ಚಿತ್ರ ಕನ್ನಡದಲ್ಲಿ ಯಶಸ್ಸು ಕಂಡ ನಂತರ ಅದನ್ನು ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂಗೆ ರಿಮೇಕ್ ಮಾಡಲಾಯಿತು.

ನಾವು ಸಿನಿಮಾ ರಿಲೀಸ್ ಗೆ ಮುಂಚೆ ಹೆಚ್ಚು ಪ್ರಚಾರ ಮಾಡಿರಲಿಲ್ಲ. ಆದಾಗ್ಯೂ ದೊಡ್ಡ ಯಶಸ್ಸು ಸಿಕ್ಕಿದೆ. ಕಾಂತಾರ ಪ್ಯಾನ್ ಇಂಡಿಯಾ ಸಿನಿಮಾ ಆಗುತ್ತದೆ ಎಂದುಕೊಂಡಿರಲಿಲ್ಲ. ನಮ್ಮ ಚಿತ್ರ ಪ್ಯಾನ್ ಇಂಡಿಯಾ ಮಟ್ಟಕ್ಕೆ ತಲುಪಲು ವಿಜಯ್ ಕಿರಂಗದೂರು ಕೂಡ ಕಾರಣ. ಅವರಿಗೆ ನಮ್ಮ ಸಿನಿಮಾನ ಹೇಗೆ ತಲುಪಿಸಬೇಕು ಎನ್ನುವ ಕ್ಲ್ಯಾರಿಟಿ ಇತ್ತು. ಈ ಕ್ಲ್ಯಾರಿಟಿ ಇದ್ದಿದ್ದರಿಂದಲೇ ಯಶಸ್ಸು ಸಿಕ್ಕಿತು ಎಂದಿದ್ದಾರೆ ರಿಷಬ್.