ಟರ್ಕಿ, ಸಿರಿಯಾ ಬೆನ್ನಲ್ಲೇ ಸಿಕ್ಕಿಂನಲ್ಲೂ ಭೂಕಂಪನ – 4.3 ತೀವ್ರತೆ ದಾಖಲು…

45
firstsuddi

ಗ್ಯಾಂಗ್ಟಾಕ್: ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ಭೂಕಂಪ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರುತ್ತಿದ್ದು, ಈಗಾಗಲೇ 33 ಸಾವಿರ ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಬೆನ್ನಲ್ಲೇ ಇಂದು ಬೆಳ್ಳಂಬೆಳಗ್ಗೆ ಸಿಕ್ಕಿಂನಲ್ಲಿ 4.3 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ.

ಭೂಕಂಪನವು ಸಿಕ್ಕಿಂನ ಯುಕ್ಸೋಮ್ ನ ವಾಯುವ್ಯ ಭಾಗದಲ್ಲಿ ಮುಂಜಾನೆ 4.15ರ ಸುಮಾರಿಗೆ ಸಂಭವಿಸಿದೆ. ಸದ್ಯ ಯಾವುದೇ ಆಸ್ತಿಪಾಸ್ತಿ ಹಾನಿ ಮತ್ತು ಪ್ರಾಣ ಹಾನಿ ಆಗಿಲ್ಲ ಎಂದು ಮೂಲಗಳು ತಿಳಿಸಿವೆ.

ನಿನ್ನೆ ಮಧ್ಯಾಹ್ನ ಅಸ್ಸಾಂನ ನಾಗಾನ್ ನಲ್ಲಿ 4.0 ತೀವ್ರತೆಯ ಭೂಕಂಪನ ಸಂಭವಿಸಿತ್ತು. ಎರಡು ದಿನಗಳ ಹಿಂದೆಯಷ್ಟೇ ಗುಜರಾತ್ ನ ಸೂರತ್ ಜಿಲ್ಲೆಯಲ್ಲೂ 3.8 ತೀವ್ರತೆಯ ಭೂಕಂಪನ ದಾಖಲಾಗಿತ್ತು.