ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು 3,09,182 ಕೋಟಿ ರೂ ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ. ಬೊಮ್ಮಾಯಿ ಅವರು ಮಂಡನೆ ಮಾಡಿರುವ ಎರಡನೇ ಬಜೆಟ್ ಇದಾಗಿದೆ. ಇದು ಈ ಸರ್ಕಾರದ ಕೊನೆಯ ಬಜೆಟ್ ಕೂಡ ಆಗಿದೆ.
ಯಾವ್ಯಾವ ಇಲಾಖೆಗೆ ಎಷ್ಟು ಕೋಟಿ ಅನುದಾನ?
ಶಿಕ್ಷಣ ಇಲಾಖೆ – 37,960 ಕೋಟಿ ರೂ.
ಜಲಸಂಪನ್ಮೂಲ ಇಲಾಖೆ – 22,854 ಕೋಟಿ ರೂ.
ನಗರಾಭಿವೃದ್ಧಿ ಇಲಾಖೆ – 17,938 ಕೋಟಿ ರೂ.
ಕಂದಾಯ ಇಲಾಖೆ – 15,943 ಕೋಟಿ ರೂ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ – 20,494 ಕೋಟಿ ರೂ.
ಇಂಧನ ಇಲಾಖೆ – 13,803 ಕೋಟಿ ರೂ.
ಸಮಾಜ ಕಲ್ಯಾಣ ಇಲಾಖೆ – 11,163 ಕೋಟಿ ರೂ.
ಲೋಕೋಪಯೋಗಿ ಇಲಾಖೆ – 10,741 ಕೋಟಿ ರೂ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – 15,151 ಕೋಟಿ ರೂ.
ಕೃಷಿ ಮತ್ತು ತೋಟಗಾರಿಕೆ ಇಲಾಖೆ – 9,456 ಕೋಟಿ ರೂ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – 5,676 ಕೋಟಿ ರೂ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ – 4,600 ಕೋಟಿ ರೂ.
ಒಳಾಡಳಿತ ಮತ್ತು ಸಾರಿಗೆ – 14,509 ಕೋಟಿ ರೂ.
ವಸತಿ ಇಲಾಖೆ – 3,787 ಕೋಟಿ ರೂ.
ಇತರೆ ಇಲಾಖೆ – 1,16,968 ಕೋಟಿ ರೂ.










