ಎಸ್.ಕೆ.ಭಗವಾನ್ ನಿಧನಕ್ಕೆ ಸಿಎಂ ಬೊಮ್ಮಾಯಿ ಸೇರಿ ಅನೇಕ ಗಣ್ಯರ ಸಂತಾಪ…

72
firstsuddi

ದೊರೈ ಭಗವಾನ್ ಎಂದೇ ಖ್ಯಾತಿ ಹೊಂದಿದ್ದ ಎಸ್.ಕೆ.ಭಗವಾನ್ ಅವರು ವಯೋಸಹಜ ಕಾಯಿಲೆಯಿಂದ ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ಧರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕನ್ನಡ ಚಲನಚಿತ್ರರಂಗದ ಖ್ಯಾತ ನಿರ್ದೇಶಕ ಶ್ರೀ ಎಸ್. ಕೆ. ಭಗವಾನ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ಅತ್ಯಂತ ಬೇಸರವಾಯಿತು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಕುಟುಂಬವರ್ಗದವರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಕನ್ನಡ ಕಲಾ ಜಗತ್ತು ಮತ್ತು ಸಿನಿಮಾ ಪ್ರಪಂಚವನ್ನು ಬೆಳಗಿ ಬೆಳ್ಳಿತೆರೆಯನ್ನು ಶ್ರೀಮಂತಗೊಳಿಸಿದ್ದ ಹಿರಿಯ ನಿರ್ದೇಶಕ ಎಸ್.ಕೆ.ಭಗವಾನ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅಭಿಮಾನಿಗಳು ಮತ್ತು ಕುಟುಂಬ ವರ್ಗಕ್ಕೆ ದೇವರು ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರು, ಅನೇಕ ಸದಾಭಿರುಚಿಯ ಚಿತ್ರಗಳನ್ನು ಕೊಟ್ಟವರು, ವರನಟರಾದ ಡಾ.ರಾಜ್ ಕುಮಾರ್ ಅವರು ನಟಿಸಿದ ‘ಕಸ್ತೂರಿ ನಿವಾಸ’ದಂಥ ಅವಿಸ್ಮರಣೀಯ ಚಿತ್ರವನ್ನು ನಿರ್ದೇಶನ ಮಾಡಿದ್ದ ದೊರೆ ಭಗವಾನ್ ಜೋಡಿ ಖ್ಯಾತಿಯ ಕೆ.ಎಸ್.ಭಗವಾನ್ ಅವರು ನಿಧನರಾದರೆಂಬ ಸುದ್ದಿ ಕೇಳಿ ಬಹಳ ದುಃಖವಾಯಿತು. ಶ್ರೀ ಭಗವಾನ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಆ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.