ಮೂಡಿಗೆರೆ : ಬೈದುವಳ್ಳಿ-ದಿಣ್ಣೆಕೆರೆ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ…

302
firstsuddi

ಮೂಡಿಗೆರೆ : ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗಲೇ ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸಲು ಮುಂದಾಗದಿರುವುದರಿಂದ ಗೋಣಿಬೀಡು ಹೋಬಳಿ ಬೈದುವಳ್ಳಿ-ದಿಣ್ಣೆಕೆರೆ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸಲು ಮುಂದಾಗಿದ್ದಾರೆ.

ಮೂಲಭೂತ ಸೌಲಭ್ಯಕ್ಕಾಗಿ ಗ್ರಾಮದ ಮುಂದೆ ಬಹಿಷ್ಕಾರದ ಬ್ಯಾನರ್ ಹಾಕಿ ಜನರು ಆಕ್ರೋಶ ಹೊರಹಾಕಿದ್ದಾರೆ. ಹಲವು ವರ್ಷಗಳಿಂದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ತಂದರೂ ಈವರೆಗೂ ಮೂಲಭೂತ ಸೌಲಭ್ಯ ಕಲ್ಪಿಸಿಲ್ಲ ಎಂದು ಗ್ರಾಮಸ್ಥರು ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

ಈ ಬಗ್ಗೆ ಗ್ರಾಮಸ್ಥರಾದ ಆಕಾಶ್ ಮಾತನಾಡಿ, ಚುನಾವಣೆ ಬಂದಾಗ ಅದು ಮಾಡಿಕೊಡುತ್ತೇವೆ ಇದು ಮಾಡಿಕೊಡುತ್ತೇವೆ ಎಂದು ನಂಬಿಸುತ್ತಾರೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ನಮ್ಮ ಊರಿಗೆ ರಸ್ತೆ ಇಲ್ಲ, ವಿದ್ಯುತ್ ಇದೆ ಎಂದು ಹೆಸರಿಗೆ ಮಾತ್ರ, ವೋಲ್ಟೇಜ್ ಸಮಸ್ಯೆ ಇದೆ ಈ ಬಾರಿ ಚುನಾವಣೆ ಬಹಿಷ್ಕಾರ ಮಾಡಿದ್ದೇವೆ ನಮ್ಮ ಊರು ಕಡೆ ಯಾವ ಪ್ರತಿನಿಧಿಗಳು ಬರೋದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು.