ಡಿ.ರೂಪಾ, ರೋಹಿಣಿ ಸಿಂಧೂರಿಗೆ ರಾಜ್ಯ ಸರ್ಕಾರದಿಂದ ಖಡಕ್ ಸೂಚನೆ…

60
firstsuddi

ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ಬೀದಿ ರಂಪಾಟ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಇಬ್ಬರಿಗೂ ನೋಟಿಸ್ ಜಾರಿ ಮಾಡಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ನೋಟಿಸ್ ನೀಡಿದ್ದು, ಸೇವಾ ನಿಯಮದ ಉಲ್ಲಂಘನೆ ಮಾಡದಂತೆ ಇಬ್ಬರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ನಿಮಗೆ ಆರೋಪ ಮಾಡಲು ಸೂಕ್ತ ವೇದಿಕೆ ಇದೆ. ಆದರೆ ಅದನ್ನು ಬಿಟ್ಟು ನೀವು ಮಾಧ್ಯಮ ಮುಂದೆ ಹೋಗಿದ್ದೀರಿ. ಇದರಿಂದ ರಾಜ್ಯ ಸರ್ಕಾರಕ್ಕೆ ಮುಜುಗರ ಆಗಿದೆ. ಇದು ಅಖಿಲ ಭಾರತೀಯ ಸೇವಾ ನಿಯಮಗಳ ಉಲ್ಲಂಘನೆ ಎಂದು ಖಡಕ್ ಸೂಚನೆ ನೀಡಲಾಗಿದೆ.

ನಿನ್ನೆ ಇಬ್ಬರೂ ಅಧಿಕಾರಿಗಳು ಮುಖ್ಯ ಕಾರ್ಯದರ್ಶಿಯನ್ನು ಭೇಟಿ ಮಾಡಿ ದೂರನ್ನು ಸಲ್ಲಿಸಿದ್ದರು. ಈ ವೇಳೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ರೋಹಿಣಿ ಸಿಂಧೂರಿ ಹಾಗೂ ಡಿ.ರೂಪಾಗೆ ಮಾಧ್ಯಮಗಳ ಮುಂದೆ ಹೋಗದಂತೆ ನಿರ್ದೇಶನ ನೀಡಿದ್ದರು. ಜೊತೆಗೆ ಸೇವಾ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು.