ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್ಸನ್ನೇ ಕದ್ದೊಯ್ದ ಕಳ್ಳರು!

64
firstsuddi

ಕಲಬುರಗಿ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಸರ್ಕಾರಿ ಬಸನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಚಿಂಚೋಳಿ ಪಟ್ಟಣದಲ್ಲಿರುವ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕೆಎಸ್‌ಆರ್‌ಟಿಸಿ ಬಸನ್ನು ಇಂದು ನಸುಕಿನ ಜಾವ 3.30ರ ಸಮಯದಲ್ಲಿ ಕಳ್ಳರು ಕದ್ದೊಯ್ದಿದ್ದಾರೆ. ಬೀದರ್ ಡಿಪೋ ನಂಬರ್ 2 ಕ್ಕೆ ಸೇರಿದ್ದ ಕೆಎ 38 ಎಫ್ 971 ನಂಬರ್ ನ ಬಸ್, ನಿನ್ನೆ ಬೀದರ್ ನಿಂದ ಚಿಂಚೋಳಿಗೆ ಬಂದಿತ್ತು.

ನಕಲಿ ಕೀ ಬಳಸಿ, ಬಸನ್ನು ಕಳ್ಳರು ಕದ್ದೊಯ್ದಿದ್ದಾರೆ. ಚಿಂಚೋಳಿಯಿಂದ ತಾಂಡೂರ ಮಾರ್ಗವಾಗಿ ತೆಲೆಂಗಾಣ ರಾಜ್ಯದ ಕಡೆ ತಗೆದುಕೊಂಡು ಹೋಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಬಸ್ ಕಳ್ಳತನವಾಗಿರುವ ಬಗ್ಗೆ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಇದೀಗ ಬಸನ್ನು ಕದ್ದೊಯ್ದಿರುವ ಆರೋಪಿಗಳ ಬೆನ್ನುಬಿದ್ದಿದ್ದಾರೆ.