ಮನೆ ಮುಂದೆ ನಿಲ್ಲಿಸಿದ್ದ ಕಾರುಗಳ ಮೇಲೆ ಕಲ್ಲು ತೂರಿ ಕಿಡಿಗೇಡಿಗಳ ಪುಂಡಾಟ…

50
firstsuddi

ಬೆಂಗಳೂರು: ಪುಂಡರು ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಕಲ್ಲು ತೂರಾಟ ಮಾಡಿ ಗಾಜು ಪುಡಿ ಮಾಡಿರುವ ಘಟನೆ ನಗರದ ಶ್ರೀನಿವಾಸನಗರದಲ್ಲಿ ನಡೆದಿದೆ.

ತಡರಾತ್ರಿ 2:50ರ ವೇಳೆಗೆ ಬೈಕ್ ನಲ್ಲಿ ಬಂದಿದ್ದ ಇಬ್ಬರು ಪುಂಡರು ಮನೆ ಮುಂದೆ ನಿಲ್ಲಿಸಲಾಗಿದ್ದ ಕಾರುಗಳ ಗಾಜುಗಳ ಮೇಲೆ ಕಲ್ಲುತೂರಿ ಪರಾರಿಯಾಗಿದ್ದಾರೆ. ಆರೋಪಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆಯಲ್ಲಿ ಐ20, ಹ್ಯೂಂಡೈ, ಓಮ್ನಿ ಕಾರುಗಳು ಸೇರಿದಂತೆ 6ಕ್ಕೂ ಹೆಚ್ಚು ಕಾರುಗಳಿಗೆ ಹಾನಿಯಾಗಿದೆ. ಘಟನೆ ಬಗ್ಗೆ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.