ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕುಲದೀಪ್ ಆರ್ ಜೈನ್ ಅಧಿಕಾರ ಸ್ವೀಕಾರ…

65
firstsuddi

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕುಲದೀಪ್ ಆರ್ ಜೈನ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮನ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಅವರು ನೂತನ ಆಯುಕ್ತರಿಗೆ ಅಧಿಕಾರವನ್ನು ಹಸ್ತಾಂತರ ಮಾಡಿದರು.

ರಾಜಸ್ಥಾನದಲ್ಲಿ ಹುಟ್ಟಿದ ಕುಲದೀಪ್ ಅವರು ಬೆಳೆದಿದ್ದು ಚೆನ್ನೈನಲ್ಲಿ. 2011ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಕುಲದೀಪ್ ಅವರು , ದ.ಕ ಜಿಲ್ಲೆಯಲ್ಲಿ ಪ್ರೊಬೆಷನರಿ ಸೇವೆಯನ್ನು ನಿರ್ವಹಿಸಿದ್ದಾರೆ. ಅಲ್ಲದೆ ಚನ್ನಪಟ್ಟಣದಲ್ಲಿ ಎಎಸ್ ಪಿ, ಚಾಮರಾಜನಗರ ಎಸ್ ಪಿ, ಬಿಜಾಪುರ ಎಸ್ ಪಿ, ಬೆಂಗಳೂರು ಸಿಟಿ ಕ್ರೈಂ ಮತ್ತು ಟ್ರಾಫಿಕ್ ಡಿಸಿಪಿ, ಕೆಎಸ್ಆರ್ ಪಿ ಹಾಗೂ ಎಸಿಬಿಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು ಭ್ರಷ್ಟಾಚಾರವನ್ನ ಸಹಿಸಲ್ಲ, ಯಾವುದೇ ಮಾಹಿತಿ ಇದ್ರೆ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಎಲ್ಲರ ಸಹಯೋಗದೊಂದಿಗೆ ಒಳ್ಳೆಯ ರೀತಿ ಕೆಲಸ ಮಾಡುತ್ತೇನೆ ಎಂದ ಅವರು ಮಂಗಳೂರು ಬಹಳ ಚೆನ್ನಾಗಿದೆ, ನಿನ್ನೆ ರಾತ್ರಿಯೇ ನೋಡಿಕೊಂಡು ಬಂದಿದ್ದು, ಇಲ್ಲಿ ಚಾಲೆಂಜ್ ಅನ್ನೋದಕ್ಕಿಂದ ದಿನನಿತ್ಯ ಸರಿಯಾಗಿ ಕೆಲಸ ಮಾಡಬೇಕು. ಸೂಪರ್ ವಿಷನ್, ಸಂಪರ್ಕ ಚೆನ್ನಾಗಿದ್ದರೆ ಎಲ್ಲರಿಗೂ ಒಳ್ಳೆಯದಾಗುತ್ತೆ ಅಕ್ರಮ ಚಟುವಟಿಕೆ ಬಗ್ಗೆ ಮಾಹಿತಿ ಬಂದ್ರೆ ಕ್ರಮ ನಿಶ್ಚಿತ ಎಂದರು.