ಮೈ ಮರೆತ್ರೆ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತೆ : ಪ್ರತಾಪ್ ಸಿಂಹ.

64
firstsuddi

ಮೈಸೂರು : ಬಿಜೆಪಿ ಕಾರ್ಯಕರ್ತರು ಮೈ ಮರೆತರೆ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ. ಆದ್ದರಿಂದ ಮತ್ತೊಮ್ಮೆ ಬಿಜೆಪಿ ನೇತೃತ್ವದ ರಾಷ್ಟ್ರೀಯವಾದಿ ಸರ್ಕಾರವನ್ನು ತರಲು ಪ್ರಯತ್ನ ಮಾಡಿ ಎಂದು ಸಂಸದ ಪ್ರತಾಪ್ ಸಿಂಹ ಕರೆ ನೀಡಿದರು.

ಮೈಸೂರಿನಲ್ಲಿ ನಡೆದ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಮದುವೆ, ಮುಂಜಿ, ಬೀಗರ ಊಟ ಅನೇಕ ಕಾರ್ಯಕ್ರಮಕ್ಕೆ ಮೈಸೂರಿಗೆ ಬರುತ್ತಿದ್ದರು. ಆದರೆ ದುಷ್ಕರ್ಮಿಗಳಿಂದ ಹತ್ಯೆಯಾದ ಕ್ಯಾತಮಾರನಹಳ್ಳಿಯ ರಾಜುವಿನ ಮನೆಗೆ ಸೌಜನ್ಯಕ್ಕೂ ಭೇಟಿ ನೀಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಪಿಎಫ್ ಐ, ಕೆಎಫ್ ಡಿಯ 175 ಸದಸ್ಯರ ಮೇಲಿದ್ದ ಪ್ರಕರಣವನ್ನು ಸಿದ್ದರಾಮಯ್ಯ ವಾಪಸ್ ಪಡೆದರು. ಪರಿಣಾಮ ಎರಡು ಡಜನ್ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯಲು ಕಾರಣವಾಯಿತು. ಈಗ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ ಹವಣಿಸುತ್ತಿದ್ದಾರೆ. ಒಂದು ವೇಳೆ ನಮ್ಮ ಕಾರ್ಯಕರ್ಯರು ಈ ವೇಳೆ ಮೈ ಮರೆತರೆ, ರಾಜ್ಯದಲ್ಲಿ ಮತ್ತೆ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದರು.