ಪ್ರಧಾನಿ ಮೋದಿ ಸಹೋದರ ಆಸ್ಪತ್ರೆಗೆ ದಾಖಲು…

50
firstsuddi

ಚೆನ್ನೈ : ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದಾಗಿ ಅವರನ್ನು ಚೆನ್ನೈನ ಅಯನಂಬಾಕ್ಕಂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಪ್ರಹ್ಲಾದ್ ಮೋದಿ ಭಾರತದಲ್ಲಿ ಆಧ್ಯಾತ್ಮಿಕ ಪ್ರವಾಸದಲ್ಲಿದ್ದರು. ಅವರು ತಮ್ಮ ಕುಟುಂಬದೊಂದಿಗೆ ಕನ್ಯಾಕುಮಾರಿ, ಮುಧುರೈ, ರಾಮೇಶ್ವರಂನಲ್ಲಿರುವ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದರು. ಅನಿರೀಕ್ಷಿತವಾಗಿ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಆದ್ದರಿಂದ ಅವರನ್ನು ಚೆನ್ನೈನ ಆಸ್ಪತೆಗೆ ದಾಖಲಿಸಲಾಯಿತು. ಸದ್ಯ ಚಿಕಿತ್ಸೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ವರ್ಷ ಡಿಸೆಂಬರ್ ನಲ್ಲಿ ಪ್ರಧಾನಿ ಮೋದಿಯವರ ಸಹೋದರ ಮತ್ತು ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ಕರ್ನಾಟಕದ ಮೈಸೂರಿನಲ್ಲಿ ಅಪಘಾತಕ್ಕೀಡಾಗಿ ಗಾಯಗೊಂಡಿದ್ದರು.