ಭಾರತ ಮಾತ್ರವಲ್ಲದೇ ವಿದೇಶದಲ್ಲೂ ಮುಖೇಶ್ ಅಂಬಾನಿ ಕುಟುಂಬಕ್ಕೆ Z+ ಭದ್ರತೆ ನೀಡಿ : ಸುಪ್ರೀಂ ಸೂಚನೆ…

70
firstsuddi

ನವದೆಹಲಿ : ಉದ್ಯಮಿ ಮುಖೇಶ್ ಅಂಬಾನಿ ಹಾಗೂ ಅವರ ಕುಟುಂಬಕ್ಕೆ ಭಾರತ ಮಾತ್ರವಲ್ಲದೇ ವಿದೇಶದಲ್ಲಿಯೂ ಝೆಡ್ ಪ್ಲಸ್ (Z+) ಭದ್ರತೆ ಒದಗಿಸುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ನ್ಯಾಯಮೂರ್ತಿ ಕೃಷ್ಣ ಮುರಾರಿ ಮತ್ತು ಅಹ್ಸಾನುದ್ದಿನ್ ಅಮಾನುಲ್ಲಾ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದೆ. ಮುಖೇಶ್ ಕುಟುಂಬದ 2 ರಿಂದ 6 ಮಂದಿಗೆ ಭದ್ರತಾ ಬೆದರಿಕೆ ಇದೆ. ಹೀಗಾಗಿ ಅವರೆಲ್ಲರಿಗೂ ದೇಶವಲ್ಲದೇ ವಿದೇಶದಲ್ಲಿಯೂ ರಕ್ಷಣೆ ನೀಡಬೇಕಾಗಿದೆ. ಭಾರತ ಅಥವಾ ವಿದೇಶದಲ್ಲಿ ಅಂಬಾನಿ ಕುಟುಂಬಕ್ಕೆ ಝೆಡ್ ಪ್ಲಸ್ ಭದ್ರತೆ ಒದಗಿದುವ ಸಂಪೂರ್ಣ ವೆಚ್ಚವನ್ನು ಅವರೇ ಭರಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

ಮುಖೇಶ್ ಅಂಬಾನಿ ಕುಟುಂಬಕ್ಕೆ ಝೆಡ್ ಪ್ಲಸ್ ಭದ್ರತೆ ನೀಡುವ ಬಗ್ಗೆ ಮಾಹಿತಿ ನೀಡಲು ಕೋರಿ 2022ರ ಜುಲೈ 22ರಂದು ಬಿಕಾಶ್ ಸಾಹಾ ಎಂಬುವರು ತ್ರಿಪುರಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿವರ ನೀಡುವಂತೆ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಭದ್ರತಾ ಮಾಹಿತಿ ಕೇಳಿರುವುದನ್ನು ಪ್ರಶ್ನಿಸಿ ತ್ರಿಪುರಾ ಕೋರ್ಟ್ ವಿರುದ್ಧ ಕೇಂದ್ರ ಸರ್ಕಾರ ಸುಪ್ರೀಂಗೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ವಿದೇಶದಲ್ಲೂ ಭದ್ರತೆ ನೀಡುವಂತೆ ಸೂಚಿಸಿ ಆದೇಶೀಸಿದೆ.