ತರಗತಿಯಲ್ಲೇ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ…

57
firstsuddi

ಹೈದರಾಬಾದ್: 11ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ತನ್ನ ತರಗತಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಾಲೇಜೊಂದರಲ್ಲಿ ನಿನ್ನೆ ನಡೆದಿದೆ.

ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ರಾತ್ರಿ 10 ಗಂಟೆಯ ಬಳಿಕ ನಾಪತ್ತೆಯಾಗಿದ್ದ. ಶಾಲಾ ಕಟ್ಟಡದ ಎಲ್ಲಾ ಕೊಠಡಿಗಳಲ್ಲಿ ತೀವ್ರ ಶೋಧ ನಡೆಸಿದಾಗ ಆತನ ಮೃತದೇಹ ಪತ್ತೆಯಾಗಿತ್ತು. ವಿದ್ಯಾರ್ಥಿಯ ಸಾವಿಗೆ ಕಾರಣ ತಿಳಿದು ಬಂದಿಲ್ಲ.

ತೆಲಂಗಾಣದಲ್ಲಿ ಕಳೆದ ಒಂದು ವಾರದಿಂದ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಮುಂದುವರಿದಿದ್ದು ಪೋಷಕರು ಮತ್ತು ಶಿಕ್ಷಕರಲ್ಲಿ ಆತಂಕ ಮೂಡಿಸಿದೆ. ಸ್ನೇಹಿತನೊಬ್ಬ ವೈಯಕ್ತಿಕ ಫೋಟೋಗಳನ್ನು ಸೋರಿಕೆ ಮಾಡಿದ್ದ ಹಿನ್ನೆಲೆಯಲ್ಲಿ ಭಾನುವಾರ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ವಾರಂಗಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.

ಕಳೆದ ಡಿಸೆಂಬರ್ ನಲ್ಲಿ ಹಿರಿಯ ವಿದ್ಯಾರ್ಥಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ವೈದ್ಯಕೀಯ ವಿದ್ಯಾರ್ಥಿನಿ ಭಾನುವಾರ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಮತ್ತೊಂದು ಘಟನೆಯಲ್ಲಿ ಕಳೆದ ಶನಿವಾರ ನಿಜಾಮಾಬಾದ್ ನ ಹಾಸ್ಟೆಲ್ ಕೋಣೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು.