ಆಸ್ಪತ್ರೆಯಿಂದ ಹೆಚ್.ಡಿ ದೇವೇಗೌಡರು ಡಿಸ್ಚಾರ್ಜ್…

46
firstsuddi

ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮೊಣಕಾಲು ನೋವಿನ ಚಿಕಿತ್ಸೆಗಾಗಿ ಕಳೆದ ಐದು ದಿನಗಳಿಂದ ದೇವೇಗೌಡರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಮೊಣಕಾಲು ನೋವು ಕಡಿಮೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಇಂದು ಬೆಳಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ.

ಹೆಚ್.ಡಿ ದೇವೇಗೌಡ ಅವರು ಫೆಬ್ರವರಿ 28ರಂದು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದರು. ಇದರಿಂದ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ಟ್ವೀಟ್ ಮೂಲಕ ಮಾಹಿತಿ ನೀಡಿದ್ದ ದೇವೇಗೌಡರು, ಯಾರೂ ಗಾಬರಿಪಡುವ ಅಗತ್ಯವಿಲ್ಲ. ಮಾಮೂಲಿ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದೇನೆ. ಮುಂದಿನ ಕೆಲವೇ ದಿನಗಳಲ್ಲಿ ಮನೆಗೆ ಮರಳಲಿದ್ದೇನೆ ಎಂದಿದ್ದರು.