ಮನೀಶ್ ಸಿಸೋಡಿಯಾಗೆ 14 ದಿನ ನ್ಯಾಯಾಂಗ ಬಂಧನ…

54
firstsuddi

ನವದೆಹಲಿ : ದೆಹಲಿಯ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಸಿಬಿಐ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮನೀಶ್ ಸಿಸೋಡಿಯಾ ಅವರ ಸಿಬಿಐ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನಲೆಯಲ್ಲಿ ಅವರನ್ನು ಸಿಬಿಐ ಅಧಿಕಾರಿಗಳು ಇಂದು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೋರ್ಟ್ ಮಾರ್ಚ್ 20 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ನ್ಯಾಯಾಂಗ ಬಂಧನದ ಅವಧಿಯಲ್ಲಿ ಸಿಸೋಡಿಯಾಗೆ ಭಗವದ್ಗೀತೆ, ಡೈರಿ, ಪೆನ್ನು, ಕನ್ನಡಕ ನೀಡಬೇಕು ಎಂದು ಅವರ ಪರ ವಕೀಲರು ಮನವಿ ಮಾಡಿದರು. ಸಿಸೋಡಿಯಾ ಮನವಿ ಸ್ಪಂದಿಸಿದ ನ್ಯಾಯಾಧೀಶ ಎಂ.ಕೆ ನಾಗ್‌ಪಾಲ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.