ಮಂಡ್ಯ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಕಾರಿಗೆ ಮೊಟ್ಟೆ ಎಸೆದ ಕಾರ್ಯಕರ್ತರು…

45
firstsuddi

ಮಂಡ್ಯ : ಮಂಡ್ಯ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ ಗಂಗಾಧರ್ ಕಾರಿಗೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿರುವ ಘಟನೆ ನಡೆದಿದೆ.

ಸಚಿವ ನಾರಾಯಣಗೌಡ ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆ ಎಂಬ ವಿಚಾರ ರಾಜ್ಯ ರಾಜಕಾರಣದಲ್ಲಿ ಸುದ್ದಿಯಾಗಿತ್ತು. ಈ ಬಗ್ಗೆ ಕೆಆರ್ ಪೇಟೆ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಮಂಡ್ಯ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ ಗಂಗಾಧರ್ ಅವರ ಕಾರಿನ ಮೇಲೆ ಮೊಟ್ಟೆ ಎಸೆದು ಆಕ್ರೋಶ ಹೊರ ಹಾಕಿದ್ದಾರೆ.

ನಾರಾಯಣಗೌಡ ಕಾಂಗ್ರೆಸ್ ಗೆ ಬಂದ್ರೆ ಪ್ರಜಾಧ್ವನಿ ಯಾತ್ರೆಗೆ ಕಲ್ಲು ಹೊಡೆಯುತ್ತೇವೆ. ನಾರಾಯಣಗೌಡ ಕಾಂಗ್ರೆಸ್ ಗೆ ಬಂದರೆ ನಾವು ಸುಮ್ಮನೆ ಇರಲ್ಲ. ಅವರು ಕಾಂಗ್ರೆಸ್ ಗೆ ಬರಬಾರದು ಎಂದು ಕಾರ್ಯಕರ್ತರು ಕಾಂಗ್ರೆಸ್ ನಾಯಕರನ್ನು ಹಿಗ್ಗಾಮುಗ್ಗ ತರಾಟೆ ತೆಗೆದುಕೊಂಡರು.

ಘಟನೆ ಸಂಬಂಧ ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಬಳಿಕ ಕಾಂಗ್ರೆಸ್ ಮುಖಂಡರು ಆಗಮಿಸಿ ಕಾರ್ಯಕರ್ತರನ್ನು ಸಮಾಧಾನ ಪಡಿಸಿದ ಬಳಿಕ ಪರಿಸ್ಥಿತಿ ತಿಳಿಗೊಂಡಿದೆ ಎಂದು ತಿಳಿದು ಬಂದಿದೆ.