ಮನೀಶ್ ಸಿಸೋಡಿಯಾಗೆ ಇಡಿ ಸಂಕಷ್ಟ – ತಿಹಾರ್ ಜೈಲಿನಲ್ಲಿ ವಿಚಾರಣೆ…

39
firstsuddi

ನವದೆಹಲಿ: ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಇಂದು ಬೆಳಗ್ಗೆ ತಿಹಾರ್ ಜೈಲು ತಲುಪಿದ ಇಡಿ ಅಧಿಕಾರಿಗಳ ತಂಡ, ಮನೀಶ್ ಸಿಸೋಡಿಯಾ ವಿಚಾರಣೆ ಆರಂಭಿಸಿದೆ. ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಗಾದ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯ, ಮಾರ್ಚ್ 20 ರವರೆಗೂ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಮೂಲದ ಉದ್ಯಮಿ ಅರುಣ್ ರಾಮಚಂದ್ರ ಪಿಳ್ಳೈ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ರಾಜಕಾರಣಿಗಳಾದ ಮಾಗುಂಟ ಶ್ರೀನಿವಾಸುಲು ರೆಡ್ಡಿ, ರಾಘವ್ ಮಾಗುಂಟ, ಶರತ್ ರೆಡ್ಡಿ ಮತ್ತು ತೆಲಂಗಾಣ ಸಿಎಂ ಪುತ್ರಿ ಕೆ ಕವಿತಾ ಸೇರಿದಂತೆ ಪ್ರಮುಖ ವ್ಯಕ್ತಿಗಳು ದಕ್ಷಿಣ ಗ್ರೂಪ್ ನ ಮದ್ಯ ವ್ಯಾಪಾರಿಗಳಾಗಿದ್ದಾರೆ ಎಂದು ಇಡಿ ಹೇಳಿದೆ.