ವಿಮಾನದಲ್ಲಿ ಸಿಗರೇಟ್ ಸೇದಿ ಆತಂಕ ಸೃಷ್ಟಿಸಿದ ಯುವತಿ…

34
firstsuddi

ಬೆಂಗಳೂರು : ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನದಲ್ಲಿ ಯುವತಿಯೊಬ್ಬಳು ಸಿಗರೇಟ್ ಸೇದಿ ಆತಂಕ ಸೃಷ್ಟಿಸಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮಾ. 5ರಂದು 6ಇ716 ವಿಮಾನ ರಾತ್ರಿ 9.50ಕ್ಕೆ ಕೋಲ್ಕತ್ತಾದಿಂದ ಹೊರಟು ಬೆಂಗಳೂರಿನಲ್ಲಿ ಲ್ಯಾಂಡ್ ಆಗಲು ಅರ್ಧ ಗಂಟೆ ಬಾಕಿ ಇತ್ತು. ಆಗ ಪಶ್ಚಿಮ ಬಂಗಾಳದ ಯುವತಿ ಪ್ರಿಯಾಂಕ ಚಕ್ರವರ್ತಿ (24) ವಿಮಾನದ ಶೌಚಾಲಯದಲ್ಲಿ ಸಿಗರೇಟ್ ಸೇದಿದ್ದಾಳೆ.
ಶೌಚಾಲಯದ ಬಾಗಿಲನ್ನು ತೆಗೆದು ಪರಿಶೀಲಿಸಿದಾಗ ಡಸ್ಟ್ ಬಿನ್ ನಲ್ಲಿ ಸಿಗರೇಟ್ ತುಂಡು ಪತ್ತೆಯಾಗಿದೆ. ತಕ್ಷಣವೇ ಎಚ್ಚೆತ್ತ ಸಿಬ್ಬಂದಿ ಡಸ್ಟ್ ಬಿನ್ ಗೆ ನೀರು ಸುರಿದಿದ್ದಾರೆ.

ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ಪ್ರಿಯಾಂಕರನ್ನು ಭದ್ರತಾ ವಿಭಾಗಕ್ಕೆ ಒಪ್ಪಿಸಲಾಗಿದೆ. ಪ್ರಯಾಣಿಕರ ಜೀವ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯ ಉಂಟು ಮಾಡಿದ ಪ್ರಕರಣದಡಿ ಕೇಸ್ ದಾಖಲಿಸಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಪ್ರಿಯಾಂಕ ಅವರನ್ನು ಬಂಧಿಸಿದ್ದಾರೆ.