ಆಜಾನ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕೆ.ಎಸ್.ಈಶ್ವರಪ್ಪ

66
firstsuddi

ಮಂಗಳೂರು : ನಗರದ ಕಾವೂರಿನ ಶಾಂತಿನಗರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಕೆ.ಎಸ್.ಈಶ್ವರಪ್ಪ ಭಾಷಣ ಮಾಡ್ತಿದ್ದಾಗ ಸ್ಥಳೀಯ ಮಸೀದಿಯಿಂದ ಆಜಾನ್ ಕೇಳಿಬಂತು. ಇದರಿಂದ ಸಿಡಿಮಿಡಿಗೊಂಡ ಈಶ್ವರಪ್ಪ ನಾನು ಎಲ್ಲಿ ಹೋದ್ರು ಇದೊಂದು ತಲೆನೋವು. ಮೈಕ್ ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಎಂದು ಆಜಾನ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶವಿದ್ದು, ಇಂದಲ್ಲ ನಾಳೆ ಇದು ಖತಂ ಆಗಲಿದೆ. ಇದರಲ್ಲೇನು ಅನುಮಾನ ಬೇಡ. ಎಲ್ಲಾ ಧರ್ಮಗಳಿಗೆ ಗೌರವ ಕೊಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಾರೆ. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಎಂದು ಪ್ರಶ್ನಿಸಿದರು.

ನಮ್ಮ ದೇವಸ್ಥಾನಗಳಲ್ಲೂ ಪೂಜೆ ಮಾಡುತ್ತೇವೆ. ಶ್ಲೋಕ, ಭಜನೆಗಳನ್ನು ಹೇಳಲಾಗುತ್ತದೆ. ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ. ಪ್ರಪಂಚದಲ್ಲಿ ಧರ್ಮವನ್ನು ಉಳಿಸುವಂಥಹ ದೇಶ ಭಾರತ ಮಾತ್ರ ಎಂದು ಹೇಳಿದ್ದಾರೆ.