ರಟ್ಟಿಹಳ್ಳಿಯಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ ; ಸ್ಥಳದಲ್ಲಿ ಬಿಗುವಿನ ವಾತಾವರಣ…

53
firstsuddi

ಹಾವೇರಿ: ಮಸೀದಿಯೊಂದರ ಮೇಲೆ ಹಿಂದೂ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ ಘಟನೆ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಇಂದು ನಡೆದಿದೆ.

ಮಾರ್ಚ್ 9ರಂದು ಸಂಗೊಳ್ಳಿ ರಾಯಣ್ಣ ಮೂರ್ತಿ ಮೆರವಣಿಗೆ ವೇಳೆ ಎರಡು ಕೋಮುಗಳ ನಡುವೆ ಗಲಾಟೆ ನಡೆದಿತ್ತು. ಕೈಯಲ್ಲಿ ಕಲ್ಲು ಹಿಡಿದು ನಿಂತಿದ್ದ ಯುವಕರು, ಬ್ಯಾರಿಕೇಡ್ ಕಿತ್ತೆಸೆದು ಮೆರವಣಿಗೆಗೆ ಅಡ್ಡಿಪಡಿಸಿದ್ದರು. ಗಲಾಟೆ ನಡೆದಿದ್ದ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಇಂದು ಬೃಹತ್ ಬೈಕ್ ರ್‍ಯಾಲಿ ನಡೆಸಿದ್ದಾರೆ.

ಕಾರಂಜಿ ಸರ್ಕಲ್ ನಲ್ಲಿ ನಡೆಯುತ್ತಿದ್ದ ಬೈಕ್ ರ್ಯಾಲಿ ವೇಳೆ ಆಟೋ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಲಾಗಿದ್ದು, ಮಸೀದಿ ಮತ್ತು ಮನೆಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಕೆಲ ಮಕ್ಕಳು ಹಾಗೂ ಮಹಿಳೆಯರಿಗೆ ಕಲ್ಲು ತೂರಾಟದಿಂದ ಗಾಯವಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಇದೀಗ ಮುಸ್ಲಿಮರು ವಾಸಿಸುವ ಪ್ರದೇಶಗಳು ಹಾಗೂ ಮಸೀದಿಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.