ಆಸ್ಕರ್ ಪ್ರಶಸ್ತಿ : ಮಾವುತರಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಬಂಪರ್ ಕೊಡುಗೆ…

70
firstsuddi

ಈ ಬಾರಿ ತೆಲುಗಿನ ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡಿಗೆ ಮತ್ತು ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರದಲ್ಲಿ ಬೊಮ್ಮನ್ ಮತ್ತು ಬೆಳ್ಳಿ ಎಂಬ ದಂಪತಿ ಕಾಣಿಸಿಕೊಂಡಿದ್ದಾರೆ. ಇವರಿಬ್ಬರ ಬದುಕಿನ ಘಟನೆಗಳನ್ನು ಈ ಸಾಕ್ಷ್ಯಚಿತ್ರದಲ್ಲಿ ತೋರಿಸಲಾಗಿದೆ. ಇದೀಗ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಈ ಮಾವುತರನ್ನು ಸನ್ಮಾನಿಸಿದ್ದಾರೆ. ಅಲ್ಲದೇ ಭರ್ಜರಿ ಬಹುಮಾನ ಘೋಷಿಸಿದ್ದಾರೆ.

ದಂಪತಿಗೆ ನೆನಪಿನ ಫಲಕ ಮತ್ತು ಎರಡು ಲಕ್ಷ ರೂಪಾಯಿ ಬಹುಮಾನ ನೀಡಿದ್ದಾರೆ. ಕೇವಲ ಈ ಇಬ್ಬರಿಗೆ ಮಾತ್ರ ಬಹುಮಾನ ನೀಡಿಲ್ಲ. ಆನೆ ಶಿಬಿರದಲ್ಲಿ ಕೆಲಸ ಮಾಡುತ್ತಿರುವ 91 ಮಾವುತರಿಗೂ ತಲಾ ಒಂದೊಂದು ಲಕ್ಷ ರೂಪಾಯಿಯನ್ನು ನೀಡಿದ್ದಾರೆ. ಅಷ್ಟೇ ಅಲ್ಲ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮಾವುತರಿಗೆ ಮನೆ ಕಟ್ಟಿಕೊಡಲು 9.1 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಘೋಷಿಸಿದ್ದಾರೆ. ದಂಪತಿಗೆ ಸನ್ಮಾನಿಸಿ ಚೆಕ್ ನೀಡಿರುವ ಫೋಟೋವನ್ನು ಸ್ಟಾಲಿನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.