ದೇಶದಲ್ಲಿ 796 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,93,506ಕ್ಕೆ ಏರಿಕೆ…

57
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 796 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,93,506ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 5 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,30,795ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,93,506 ಮಂದಿ ಸೋಂಕಿತರ ಪೈಕಿ ಈವರೆಗೆ 4,41,57,685 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.