ಪಾಟ್ನಾ: ವ್ಯಕ್ತಿಯೊಬ್ಬ ಬೀದಿ ನಾಯಿಯ ಮೇಲೆ ಅತ್ಯಾಚಾರವೆಸಗಿ ದುಷ್ಕೃತ್ಯ ಮೆರೆದಿರುವ ಘಟನೆ ಬಿಹಾರದ ಪಾಟ್ನಾದ ಫುಲ್ವಾರಿ ಶರೀಫ್ ನ ಫೈಸಲ್ ಕಾಲೋನಿಯಲ್ಲಿ ನಡೆದಿದೆ. ಸಿಸಿಟಿವಿಯಲ್ಲಿ ಕೃತ್ಯದ ದೃಶ್ಯವು ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಿಸಿಟಿವಿಯಲ್ಲಿ, ಅಪರಿಚಿತ ವ್ಯಕ್ತಿಯೊಬ್ಬ ನಾಯಿಯೊಂದಿಗೆ ಅಸಹಜ ಕೃತ್ಯವನ್ನು ಬಹಿರಂಗವಾಗಿ ಮಾಡುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಫುಲ್ವಾರಿ ಷರೀಫ್ ಪೊಲೀಸ್ ಠಾಣೆಯಲ್ಲಿ ಎನ್ಜಿಒವೊಂದು ದೂರು ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪಾಟ್ನಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಮಾತನಾಡಿ, ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.










