ಬಿಜೆಪಿಗೆ ಗುಡ್​​ಬೈ ಹೇಳಿದ ಬಾಬುರಾವ್ ಚಿಂಚನಸೂರ್.

62
firstsuddi

ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಬಾಬುರಾವ್ ಚಿಂಚನಸೂರ್ ರಾಜೀನಾಮೆ ನೀಡಿದ್ದಾರೆ. ನಿನ್ನೆ ಮಧ್ಯಾಹ್ನ ಸಭಾಪತಿ ಬಸವರಾಜ ಹೊರಟ್ಟಿಯವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ, ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನಪರಿಷತ್ ಸದಸ್ಯರಾಗಿರುವ ಕಾರಣ ಟಿಕೆಟ್ ನೀಡಲಾಗದು ಎಂದು ಬಿಜೆಪಿ ನಾಯಕರು ತಿಳಿಸಿದ್ದರು. ಹೀಗಾಗಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. ಜೊತೆಗೆ, ಬಿಜೆಪಿ ಪಕ್ಷಕ್ಕೂ ರಾಜೀನಾಮೆ ನೀಡಿದ್ದಾರೆ. ಇಂದು ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ.

ನಿಜ ಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರೂ ಆಗಿರುವ ಚಿಂಚನಸೂರ್, 2019ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆ ಆಗಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಈಗಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುವಲ್ಲಿ ಚಿಂಚನಸೂರ್ ಪ್ರಮುಖ ಪಾತ್ರ ವಹಿಸಿದ್ದರು. ಅವರು ತಿಂಗಳ ಹಿಂದೆಯೇ ಬಿಜೆಪಿಗೆ ರಾಜೀನಾಮೆ ಕೊಡಲು ಮುಂದಾಗಿದ್ದರು. ಆದರೆ, ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು ಬಿಜೆಪಿಯಲ್ಲೇ ಉಳಿಯುವುದಾಗಿ ಹೇಳಿದ್ದರು.

ಇದೀಗ ನಾಲ್ಕು ವರ್ಷಗಳ ಬಳಿಕ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲು ಮುಂದಾಗಿದ್ದಾರೆ. ಗುರುಮಠಕಲ್ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಲು ಚಿಂಚನಸೂರ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.