ಯುಗಾದಿ ಹಬ್ಬ : ಕನ್ನಡದಲ್ಲೇ ಟ್ವೀಟ್ ಮಾಡಿ ನಾಡಿನ ಜನತೆಗೆ ಶುಭಾಶಯ ತಿಳಿಸಿದ ಮೋದಿ.

63
firstsuddi

ನವದೆಹಲಿ: ಇಂದು ಭಾರತದೆಲ್ಲೆಡೆ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲೇ ಟ್ವೀಟ್ ಮಾಡಿ ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ಟ್ವೀಟ್‍ನಲ್ಲೇನಿದೆ? : ಎಲ್ಲರಿಗೂ ಸಂತಸದ ಯುಗಾದಿಯ ಶುಭಾಶಯಗಳು. ಭರವಸೆ ಮತ್ತು ಹೊಸ ಆರಂಭಗಳನ್ನು ಒಳಗೊಂಡ ಈ ಹಬ್ಬವು, ಮುಂಬರುವ ವರ್ಷದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಅಪಾರ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.