ರಾಜಮೌಳಿ ನಿರ್ದೇಶನದ ಆರ್ಆರ್ಆರ್ ಚಿತ್ರದ ‘ನಾಟು ನಾಟು’ ಹಾಡು ಆಸ್ಕರ್ ಪ್ರಶಸ್ತಿ ಗೆದ್ದಿದೆ. ‘ನಾಟು ನಾಟು’ ಹಾಡು ಆಸ್ಕರ್ ಗೆಲ್ಲಲು ಚಿತ್ರದ ನಿರ್ದೇಶಕ ರಾಜಮೌಳಿ ಹಾಗೂ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಪ್ರಮುಖ ಕಾರಣ. ಇದರ ಜೊತೆಗೆ ರಾಮ್ ಚರಣ್, ಜೂ.ಎನ್ಟಿಆರ್, ಹಾಡಿನ ಸಾಹಿತ್ಯ ಬರೆದ ಚಂದ್ರಬೋಸ್ ಮತ್ತಿತರರ ಕೊಡುಗೆಯೂ ಇದೆ. ಹೀಗಿರುವಾಗ ಹಿಂದಿ ನಟ ಅಜಯ್ ದೇವಗನ್ ಅವರು ʻನಾಟು ನಾಟು ಆಸ್ಕರ್ ಗೆದ್ದಿದ್ದಕ್ಕೆ ನಾನೇ ಕಾರಣʼ ಎಂದಿದ್ದಾರೆ.
ನಾಟು ನಾಟು ಹಾಡು ಆಸ್ಕರ್ ಗೆಲ್ಲೋಕೆ ಹಲವು ವಿಚಾರ ಕಾರಣ ಆಗಿದೆ. ಚಿತ್ರದ ಸಂಗೀತವೂ ಕಮಾಲ್ ಮಾಡಿದೆ. ಒಟ್ಟಾರೆ ಹಾಡಿನಲ್ಲಿರುವ ಪ್ರತಿ ವಿಚಾರವೂ ಆಸ್ಕರ್ ಗೆಲ್ಲೋಕೆ ಸಹಕಾರಿ ಆಗಿದೆ. ಸಂದರ್ಶನವೊಂದರಲ್ಲಿ ಅಜಯ್ ದೇವಗನ್ ಈ ವಿಚಾರದಲ್ಲಿ ಜೋಕ್ ಮಾಡಿದ್ದಾರೆ. ‘ನಾಟು ನಾಟು ಆಸ್ಕರ್ ಗೆಲ್ಲೋಕೆ ನಾನೇ ಕಾರಣ, ಏಕೆಂದರೆ ನಾನು ಆ ಹಾಡಿನಲ್ಲಿ ಡ್ಯಾನ್ಸ್ ಮಾಡಿಲ್ಲವಲ್ಲ’ ಎಂದಿದ್ದಾರೆ. ಈ ಮೂಲಕ ತಮಗೆ ಡ್ಯಾನ್ಸ್ ಮಾಡೋಕೆ ಬರಲ್ಲ ಎಂದಿದ್ದಾರೆ. ಇದೀಗ ಅಜಯ್ ದೇವಗನ್ ಅವರ ಜೋಕ್ ಅಭಿಮಾನಿಗಳಿಗೆ ಇಷ್ಟವಾಗಿದೆ.










