ಸಕ್ರಿಯ ರಾಜಕಾರಣಕ್ಕೆ ಸುಷ್ಮಾ ಸ್ವರಾಜ್ ಪುತ್ರಿ ಎಂಟ್ರಿ…

48
firstsuddi

ನವದೆಹಲಿ: ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟಿದ್ದಾರೆ. ಅವರು ದೆಹಲಿ ಬಿಜೆಪಿ ಕಾನೂನು ಘಟಕದ ಸಹ ಸಂಚಾಲಕರಾಗಿ ನೇಮಕಗೊಂಡಿದ್ದಾರೆ.

ಇಂಗ್ಲೆಂಡ್ ನ ವಾರ್ವಿಕ್ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಸಾಹಿತ್ಯದಲ್ಲಿ ಪದವಿಯನ್ನು ಪಡೆದಿದ್ದಾರೆ. ನಂತರ ಲಂಡನ್ ನ ಬಿಪಿಪಿ ಕಾನೂನು ಶಾಲೆಯಿಂದ ಪದವಿಯನ್ನು ಪಡೆದರು. ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪಡೆದರು. ವಕೀಲ ವೃತ್ತಿಯಲ್ಲಿ 16 ವರ್ಷಗಳ ಅನುಭವವಿದೆ.

ಬಾನ್ಸುರಿ ಸ್ವರಾಜ್ ಅವರು 2007 ರಲ್ಲಿ ದೆಹಲಿಯ ಬಾರ್ ಕೌನ್ಸಿಲ್ ನಲ್ಲಿ ನೋಂದಾಯಿಸಿಕೊಂಡಿದ್ದರು. ಈ ಹಿಂದೆಯೂ ಕಾನೂನು ವಿಚಾರದಲ್ಲಿ ಬಿಜೆಪಿಗೆ ಕೆಲವು ಸಲಹೆಯನ್ನು ನೀಡುತ್ತಿದ್ದರು. ಇದೀಗ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಬಿಜೆಪಿ ದೆಹಲಿ ಪ್ರದೇಶದ ಸಹ ಸಂಚಾಲಕರಾಗಿ ಪಕ್ಷಕ್ಕೆ ಸೇವೆ ಸಲ್ಲಿಸಲು ನನಗೆ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಜೆಪಿ ನಡ್ಡಾ, ಬಿಎಲ್ ಸಂತೋಷ್, ವೀರೇಂದ್ರ ಸಚ್‌ದೇವ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಮತ್ತು ನಾನು ಬಿಜೆಪಿಯನ್ನು ತುಂಬಾ ಇಷ್ಟಪಡುತ್ತೇನೆ. ನಾನು ಕೃತಜ್ಞನಾಗಿದ್ದೇನೆ ಎಂದು ಬಾನ್ಸುರಿ ಸ್ವರಾಜ್ ಟ್ವೀಟ್ ಮಾಡಿದ್ದಾರೆ.