ಶಾಸಕ ಸ್ಥಾನಕ್ಕೆ ಗುಬ್ಬಿ ಶ್ರೀನಿವಾಸ್ ರಾಜೀನಾಮೆ…

58
firstsuddi

ತುಮಕೂರು: ಜಿಲ್ಲೆಯ ಗುಬ್ಬಿ ಕ್ಷೇತ್ರದ ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್ ಶ್ರೀನಿವಾಸ್ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದ ಸ್ಪೀಕರ್ ಕಚೇರಿಗೆ ತೆರಳಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ರಾಜೀನಾಮೆ ನೀಡಿದ ನಂತರ ಮಾತನಾಡಿದ ಶ್ರೀನಿವಾಸ್, ನಾನು ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮಾರ್ಚ್ 31ಕ್ಕೆ ನಾನು ಅಧಿಕೃತವಾಗಿ ಕಾಂಗ್ರೆಸ್ ಸೇರುತ್ತೇನೆ. ಶಿವಲಿಂಗೇಗೌಡ,ಎ.ಟಿ ರಾಮಸ್ವಾಮಿ ಕೂಡ ಕಾಂಗ್ರೆಸ್ ಪಕ್ಷ ಸೇರುತ್ತಾರೆ. ಗುಬ್ಬಿಯಲ್ಲಿ ಎಲ್ಲ ಕಾಂಗ್ರೆಸ್ ನಾಯಕರು ಒಟ್ಟಾಗಿ ಇದ್ದಾರೆ. ಅವರ ಬೆಂಬಲದೊಂದಿಗೆ ಕಾಂಗ್ರೆಸ್​ನಿಂದ ಕಣಕ್ಕಿಳಿದು ಕ್ಷೇತ್ರದಲ್ಲಿ ಮತ್ತೆ ಗೆಲ್ಲುವ ವಿಶ್ವಾಸ ಇದೆ ಎಂದರು.