ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,016 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,47,12,692ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 6 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,862ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,47,12,692 ಮಂದಿ ಸೋಂಕಿತರ ಪೈಕಿ ಈವರೆಗೆ 4,41,68,321 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










