ಶ್ರೀರಾಮನ ತೊಡೆ ಮೇಲೆ ನಿಂತು ಹೂಮಾಲೆ ಹಾಕಿದ ಬಿಜೆಪಿ ಶಾಸಕ – ಫೋಟೋ ವೈರಲ್…

52
firstsuddi

ಬೀದರ್: ಬಿಜೆಪಿ ಶಾಸಕರೊಬ್ಬರು ಶ್ರೀರಾಮನ ತೊಡೆ ಮೇಲೆ ನಿಂತು ಕೊರಳಿಗೆ ಹೂವಿನ ಹಾರ ಹಾಕಿದ್ದಾರೆ. ಅಲ್ಲದೇ ಕೈ ಮುಗಿದು ಫೋಟೋಗೆ ಫೋಸ್ ಕೊಟ್ಟಿದ್ದಾರೆ. ಇದೀಗ ಈ ಫೋಟೋಗಳು ಸೋಶಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಬಸವಕಲ್ಯಾಣದಲ್ಲಿ ನಡೆದ ಶ್ರೀರಾಮನ ಶೋಭಾಯಾತ್ರೆ ವೇಳೆ ಬಸವಕಲ್ಯಾಣ ಶಾಸಕ ಶರಣು ಸಲಗರ್ ಅವರು ಶ್ರೀರಾಮನ ಎಡಗಡೆಯ ತೊಡೆ ಮೇಲೆ ನಿಂತು ಕೊರಳಿಗೆ ಹೂವಿನ ಹಾರ ಹಾಕಿ ಪೋಸ್ ಕೊಟ್ಟಿರುವ ದೃಶ್ಯವನ್ನು ನೆರೆದಿದ್ದವರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಇದೀಗ ಈ ವೀಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಶಾಸಕರ ನಡೆಗೆ ಟೀಕೆಗಳು ವ್ಯಕ್ತವಾಗುತ್ತಿದೆ. ಅಲ್ಲದೆ ಶಾಸಕರು ಬಸವಣ್ಣನ ಕರ್ಮಭೂಮಿ ಬಸವಕಲ್ಯಾಣದಲ್ಲಿ ಶ್ರೀರಾಮನಿಗೆ ಅವಮಾನ ಮಾಡಿದ್ರಾ ಎಂಬ ಪ್ರಶ್ನೆ ಹುಟ್ಟಿದೆ.