ನವದೆಹಲಿ: ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು 10 ತಿಂಗಳ ನಂತರ ಜೈಲಿನಿಂದ ಬಿಡುಗಡೆಯಾಗುತ್ತಿದ್ದಾರೆ.
ನವಜೋತ್ ಸಿಂಗ್ ಸಿಧು ಇಂದು ಬಿಡುಗಡೆಯಾಗುವುದಾಗಿ ಪಂಜಾಬ್ ಅಧಿಕಾರಿಗಳು ತಿಳಿಸಿದ್ದಾರೆ. ಬಿಡುಗಡೆಯಾದ ಬಳಿಕ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡುವುದಾಗಿ ಬೆಳಗ್ಗೆ ಸಿಧು ಅಧಿಕೃತ ಟ್ಬಿಟ್ಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.
ಸಿಧು ಬಿಡುಗಡೆಯಾದ ನಂತರ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಸಿದ್ಧತೆ ನಡೆಸುತ್ತಿದ್ದಾರೆ.
1988ರಲ್ಲಿ 65 ವರ್ಷದ ಗುರ್ನಾಮ್ ಸಿಂಗ್ ವೃದ್ಧರೊಬ್ಬರ ಸಾವಿಗೆ ಕಾರಣವಾದ ರಸ್ತೆ ರಂಪಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ 1 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
ಸುಪ್ರೀಂ ನ್ಯಾಯಪೀಠ 2018ರಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 323ರ ಅಡಿಯಲ್ಲಿ ಅಪರಾಧಿ ಎಂದು ತೀರ್ಪು ನೀಡಿ 1,000 ರೂಪಾಯಿ ದಂಡ ವಿಧಿಸಿತ್ತು. ಆದರೆ ಸಿಧು ಅವರನ್ನು ಉತ್ತಮ ನಡವಳಿಕೆಯ ಕಾರಣದಿಂದ ಬೇಗ ಬಿಡುಗಡೆ ಮಾಡುತ್ತಿದ್ದಾರೆ ಎನ್ನಲಾಗಿದೆ.










