ಅವಳಿ ಮಕ್ಕಳ ಹೆಸರನ್ನು ಬಹಿರಂಗಪಡಿಸಿದ ನಟಿ ನಯನತಾರಾ.

51
firstsuddi

ನಟಿ ನಯನತಾರಾ ಅವರು ಕುಟುಂಬ ಮತ್ತು ಸಿನಿಮಾ ಎರಡು ಕಡೆಗೂ ಗಮನ ಹರಿಸುತ್ತಿದ್ದಾರೆ. 2022ರಲ್ಲಿ ಬಾಡಿಗೆ ತಾಯಿ ಮೂಲಕ ನಯನತಾರಾ ಮತ್ತು ವಿಘ್ನೇಶ್ ಶಿವನ್ ಅವರು ಅವಳಿ ಗಂಡು ಮಕ್ಕಳನ್ನು ಪಡೆದರು. ಆದರೆ ಮುದ್ದು ಮಕ್ಕಳ ಪೂರ್ತಿ ಹೆಸರು ಏನು ಎಂಬುದನ್ನು ಅವರು ಇಷ್ಟು ದಿನಗಳ ಕಾಲ ಬಹಿರಂಗಪಡಿಸಿರಲಿಲ್ಲ. ಈಗ ಖಾಸಗಿ ಕಾರ್ಯಕ್ರಮದ ವೇದಿಕೆಯಲ್ಲಿ ಅವರು ಮಕ್ಕಳ ಪೂರ್ಣ ಹೆಸರು ಏನು ಎಂಬುದನ್ನು ತಿಳಿಸಿದ್ದಾರೆ.

ನಟಿ ನಯನತಾರಾ ಅವರು ಇತ್ತೀಚೆಗೆ ಚೆನ್ನೈನಲ್ಲಿ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಅವರಿಗೆ ಮಕ್ಕಳ ಪೂರ್ಣ ಹೆಸರು ಏನು ಎಂದು ಕೇಳಲಾಯಿತು. ಆಗ ನಟಿ, ನನ್ನ ಮೊದಲ ಮಗನ ಹೆಸರು ಉಯಿರ್ ರುದ್ರೋನೀಲ್ ಎನ್. ಶಿವನ್ ಮತ್ತು ನನ್ನ ಎರಡನೇ ಮಗನ ಹೆಸರು ಉಳಗ್ ದೈವಗನ್ ಎನ್. ಶಿವನ್ ಎಂದು ತಿಳಿಸಿದರು.

ನಯನತಾರಾ ಅವರು ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ಹಲವು ವರ್ಷಗಳ ಕಾಲ ಲಿವಿಂಗ್ ರಿಲೇಷನ್​ಶಿಪ್​ನಲ್ಲಿ ಇದ್ದರು. ಬಳಿಕ ಅವರು 2022ರ ಜೂನ್ 9ರಂದು ವಿವಾಹವಾದರು. ಈ ಸ್ಟಾರ್ ಸೆಲೆಬ್ರಿಟಿಗಳ ವಿವಾಹ ಸಮಾರಂಭಕ್ಕೆ ಅನೇಕ ಗಣ್ಯರು ಹಾಜರಿದ್ದರು. ಸದ್ಯ ನಯನತಾರಾ ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡುತ್ತಿದ್ದಾರೆ.