ಪಕ್ಷ ಹೇಳಿದ್ರೆ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ : ನಿಖಿಲ್ ಕುಮಾರಸ್ವಾಮಿ.

47
firstsuddi

ರಾಮನಗರ: ಅನಿತಾ ಕುಮಾರಸ್ವಾಮಿ ಈಗಾಗಲೇ ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. ಪಕ್ಷ ಹೇಳಿದ್ರೆ ನಾನೂ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಶಾಸಕಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನಿತಾ ಕುಮಾರಸ್ವಾಮಿ ಮತ್ತೆ ಸ್ಪರ್ಧೆ ಮಾಡಲ್ಲ. ಕಳೆದ ಬಾರಿ ರಾಮನಗರದಿಂದ ಸ್ಪರ್ಧೆಗೆ ನನಗೂ ಒತ್ತಡ ಇತ್ತು. ಆಗ ನಾನು ಸಿನಿಮಾದಲ್ಲಿ ಬ್ಯುಸಿ ಆಗಿದ್ದೆ. ಹಾಗಾಗಿ ಅನಿವಾರ್ಯ ಕಾರಣಗಳಿಂದ ಸ್ಪರ್ಧೆ ಮಾಡಿ ಗೆದ್ದರು. ಮತ್ತೆ ಅವರು ಯಾವುದೇ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ, ಅವರಿಗೆ ಆಸಕ್ತಿಯೂ ಇಲ್ಲ ಎಂದು ಹೇಳಿದರು.

ಎಲ್ಲಾ ಪಕ್ಷದಲ್ಲೂ ಗೊಂದಲಗಳು ಇದ್ದೇ ಇರುತ್ತೆ. ಹಾಸನ ಟಿಕೇಟ್ ವಿಚಾರವಾಗಿ ವರಿಷ್ಠರು ಅಂತಿಮ ನಿರ್ಧಾರ ಮಾಡ್ತಾರೆ. ದೇವೇಗೌಡರು ಜೆಡಿಎಸ್ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಹೋರಾಟದ ಹಿನ್ನೆಲೆಯಲ್ಲಿ ಬಂದ ಪಕ್ಷ ಜೆಡಿಎಸ್ ಪಕ್ಷವನ್ನು ಉಳಿಸಿಕೊಳ್ಳಲು ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದರು.