ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ…

46
firstsuddi

ನ್ಯೂಯಾರ್ಕ್ : ನೀಲಿಚಿತ್ರ ತಾರೆಗೆ ಹಣ ವರ್ಗಾವಣೆ ಪ್ರಕರಣ ಸಂಬಂಧ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬಂಧಿಸಿದ ಕೆಲವೇ ಗಂಟೆಗಳಲ್ಲಿ ಬಿಡುಗಡೆ ಮಾಡಿದ್ದಾರೆ.

ಮ್ಯಾನ್ ಹಾಟನ್ ಜಿಲ್ಲಾ ಅಟಾರ್ನಿಯ ಕೋರ್ಟ್ ಸಭಾಂಗಣದಲ್ಲಿ ಟ್ರಂಪ್ ಶರಣಾದರು. ಬಳಿಕ ಅವರನ್ನು ಬಂಧಿಸಿದ ಪೊಲೀಸರು ಬಿಗಿ ಭದ್ರತೆಯಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ಈ ವೇಳೆ ಟ್ರಂಪ್ ವಿರುದ್ಧ ಲೈಂಗಿಕ ಪ್ರಕರಣ ಮುಚ್ಚಿಡಲು ಹಣ ನೀಡಿದ್ದು, ಸೇರಿದಂತೆ ಹಣ ವಂಚನೆಯ 34 ದೋಷಾರೋಪಗಳನ್ನು ಹೊರಿಸಲಾಯಿತು. ಈ ವೇಳೆ ಟ್ರಂಪ್ ನಾನು ತಪ್ಪು ಮಾಡಿಲ್ಲ. 32 ಆರೋಪಗಳಲ್ಲಿ ನಾನು ನಿರಪರಾಧಿ ಎಂದಿದ್ದಾರೆ.

ಏನಿದು ಪ್ರಕರಣ?
ದಶಕಗಳ ಹಿಂದೆ ಗಾಲ್ಫ್ ಪಂದ್ಯಾವಳಿ ಆಡಲು ತೆರಳಿದ್ದ ವೇಳೆ ನೀಲಿ ಚಿತ್ರಗಳ ನಟಿ ಸ್ಟಾರ್ಮಿ ಡೇನಿಯಲ್ಸ್ ಜೊತೆ ಟ್ರಂಪ್ ಲೈಂಗಿಕ ಸಂಪರ್ಕ ಬೆಳೆಸಿದ್ದರು ಎನ್ನಲಾಗಿದೆ. 2011ರಲ್ಲಿ ಸ್ಟಾರ್ಮಿ ಈ ವಿಷಯದ ಬಗ್ಗೆ ಬಹಿರಂಗಪಡಿಸಿದ್ದರು. ಈ ನಡುವೆ 2016ರಲ್ಲಿ ಟ್ರಂಪ್ ಚುನಾವಣಾ ಕಣಕ್ಕೆ ಇಳಿದ ವೇಳೆ, ಲೈಂಗಿಕ ಸಂಪರ್ಕದ ವಿಷಯ ಬಹಿರಂಗ ಮಾಡದಂತೆ ತಮ್ಮ ವಕೀಲರ ಮೂಲಕ ಸ್ಟಾರ್ಮಿಗೆ 1 ಕೋಟಿ ರೂ. ಹಣ ನೀಡಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಾಗಿತ್ತು.