ಏಪ್ರಿಲ್ 8, 9ಕ್ಕೆ ಮೈಸೂರಿಗೆ ಮೋದಿ ಆಗಮನ…

58
firstsuddi

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 8 ಮತ್ತು 9ರಂದು ಮೈಸೂರು ಪ್ರವಾಸ ಮಾಡಲಿದ್ದಾರೆ.

ಏಪ್ರಿಲ್ 8ರ ರಾತ್ರಿ 8ಗಂಟೆಗೆ ಮೈಸೂರಿಗೆ ಬಂದಿಳಿಯಲಿರುವ ಪ್ರಧಾನಿ ಮೋದಿ, ರ‍್ಯಾಡಿಸನ್ ಬ್ಲೂ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಏ.9ರ ಬೆಳಗ್ಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದು, ಬಳಿಕ ಚಾಮರಾಜನಗರ ಜಿಲ್ಲೆ ಬಂಡೀಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

ಏ.9ರ ಬೆಳಗ್ಗೆ 7.30ಕ್ಕೆ ಬಂಡೀಪುರ ಉದ್ಯಾನವನಕ್ಕೆ ಭೇಟಿ ನೀಡಲಿದ್ದು, ಬಳಿಕ ಸಫಾರಿ ಮಾಡಲಿದ್ದಾರೆ. ನೀಲಗಿರಿಸ್ ಅರಣ್ಯ ಪ್ರದೇಶಕ್ಕೂ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ನಂತರ ಮೈಸೂರಿಗೆ ವಾಪಸ್ ಆಗಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಏ.9ರ ಬೆಳಗ್ಗೆ 11 ಗಂಟೆಗೆ ಕೆಎಸ್ಒಯು ಘಟಿಕೋತ್ಸವ ಭವನಕ್ಕೆ ಭೇಟಿ ನೀಡಲಿದ್ದು, ಹುಲಿ ಸಂರಕ್ಷಣಾ ಯೋಜನೆ 50ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಏ.9ರ ಮಧ್ಯಾಹ್ನ 12.30ಕ್ಕೆ ದೆಹಲಿಗೆ ವಾಪಸಾಗಲಿದ್ದಾರೆ.

ಮೈಸೂರಿನಲ್ಲಿ ಕಾರ್ಯಕ್ರಮ ಮುಕ್ತಾಯಗೊಳಿಸಿ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಸಫಾರಿ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ಬಂಡೀಪುರದ ಸಫಾರಿ ರಸ್ತೆಗಳನ್ನು ಇಲಾಖೆ ಸರಿಪಡಿಸುತ್ತಿದ್ದು, ಮೇಲುಕಾಮನಹಳ್ಳಿ ಬಳಿ ಹೆಲಿಪ್ಯಾಡ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಹಿರಿಯ ಅಧಿಕಾರಿಗಳು ಈಗಾಗಲೇ ಬಂಡೀಪುರಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.