ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ : ಸುದೀಪ್ ಬಿಜೆಪಿ ಸೇರ್ಪಡೆ ಬಗ್ಗೆ ಪ್ರಕಾಶ್ ರಾಜ್ ಪ್ರತಿಕ್ರಿಯೆ…

77
firstsuddi

ನಟ ಸುದೀಪ್ ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಕುರಿತು ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ.

ಕರ್ನಾಟಕದಲ್ಲಿ ಸೋಲುವ ಭಯದಲ್ಲಿ ಭ್ರಷ್ಟ ಬಿಜೆಪಿ ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ.

ಇಂದು ಮಧ್ಯಾಹ್ನ ಸಿಎಂ ಬಸವರಾಜ ಬೊಮ್ಮಾಯಿ ಅವರು ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ಸುದೀಪ್ ಕೂಡ ಭಾಗಿ ಆಗುವ ಸಾಧ್ಯತೆ ಇದೆ. ಈ ವೇಳೆ ಅವರು ತಮ್ಮ ರಾಜಕೀಯ ನಿಲುವು ಏನು ಎಂಬುದನ್ನು ತಿಳಿಸಲಿದ್ದಾರೆ ಎನ್ನಲಾಗುತ್ತಿದೆ.