ಮುಸ್ಲಿಂ ವ್ಯಕ್ತಿ ಅನುಮಾನಾಸ್ಪದ ಸಾವು – ರಾಜಸ್ಥಾನದಲ್ಲಿ ಪುನೀತ್ ಕೆರೆಹಳ್ಳಿ ಬಂಧನ…

51
firstsuddi

ರಾಮನಗರ : ಗೋ ಸಾಗಾಟ ವೇಳೆ ಮುಸ್ಲಿಂ ವ್ಯಕ್ತಿಯೋರ್ವ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಐದು ದಿನಗಳಿಂದ ತಲೆಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಒಟ್ಟು ಐವರನ್ನು ಸಾತನೂರು ಠಾಣೆ ಪೊಲೀಸರು ಇಂದು ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಾರ್ಚ್ 31 ರಂದು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಹಾಗೂ ತಂಡ ಗೋವುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ತಡೆದು ಜಾನುವಾರು ರಕ್ಷಣೆ ಮಾಡಿದ್ದರು. ಆದರೆ ಏಪ್ರಿಲ್ 1ರಂದು ಕ್ಯಾಂಟರ್ ನಲ್ಲಿದ್ದ ಇದ್ರೀಷ್ ಪಾಷಾ(35) ಶವವಾಗಿ ಪತ್ತೆಯಾಗಿದ್ದರು. ಈ ಸಂಬಂಧ ಮೃತನ ಸಹೋದರ ಸಾತನೂರು ಠಾಣೆಗೆ ಪುನೀತ್ ಕೆರೆಹಳ್ಳಿ ಸೇರಿದಂತೆ ಇತರರರ ವಿರುದ್ಧ ದೂರು ನೀಡಿದ್ದರು.

ಪುನೀತ್ ಕೆರೆಹಳ್ಳಿ ವಿರುದ್ಧ ಐಪಿಸಿ ಸೆಕ್ಷನ್ 341, 504, 506, 324, 302, 34 ರ ಅಡಿ ಕೇಸ್ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆಯೇ ಕಳೆದ ಐದು ದಿನದಿಂದ ಪುನೀತ್ ಹಾಗೂ ಆತನ ತಂಡ ತಲೆಮರೆಸಿಕೊಂಡಿತ್ತು. ಆರೋಪಿಗಳನ್ನು ಬಂಧಿಸಲು ರಾಮನಗರ ಎಸ್ ಪಿ ಕಾರ್ತಿಕ್ ರೆಡ್ಡಿ ನಾಲ್ಕು ತಂಡಗಳನ್ನು ರಚಿಸಿದ್ದರು. ಇದೀಗ ಆರೋಪಿಗಳನ್ನು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ.