ಸಿಎಂ ಬೊಮ್ಮಾಯಿಗೆ ಬೆಂಬಲ ನೀಡುತ್ತೇನೆ, ಆದ್ರೆ ರಾಜಕೀಯಕ್ಕೆ ಬರೋಲ್ಲ : ಸುದೀಪ್.

37
firstsuddi

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ನಾನು ಬೆಂಬಲ ನೀಡುತ್ತೇನೆ. ಆದರೆ ನಾನು ರಾಜಕೀಯಕ್ಕೆ ಸೇರ್ಪಡೆಯಾಗುತ್ತಿಲ್ಲ. ಈ ಬಗ್ಗೆ ನಾನು ನನ್ನ ಅಭಿಮಾನಿಗಳಿಗೆ ಸ್ಪಷ್ಟಪಡಿಸುತ್ತಿದ್ದೇನೆ ಎಂದು ನಟ ಸುದೀಪ್ ಹೇಳಿದರು.

ನಗರದ ಖಾಸಗಿ ಹೊಟೇಲ್ ನಲ್ಲಿ ಬಿಜೆಪಿ ಸೇರ್ಪಡೆ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ್, ಕೆ.ಸುಧಾಕರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ನಟ ಸುದೀಪ್, ಕಷ್ಟದ ದಿನಗಳಲ್ಲಿ ನನ್ನ ಜೊತೆಗೆ ನಿಂತಿದ್ದು ಸಿಎಂ ಬೊಮ್ಮಾಯಿಯವರು. ನಾನು ಚಿಕ್ಕವಯಸ್ಸಿನಿಂದ ಅವರನ್ನು ನೋಡಿದ್ದೇನೆ. ನಾನು ಚಿತ್ರರಂಗ ಪ್ರವೇಶಿಸುವಾಗ ಗಾಡ್ ಫಾದರ್ ಅಂತ ಯಾರು ಇರಲಿಲ್ಲ. ಆ ಟೈಮ್ ಲ್ಲಿ ಅವರು ನನ್ನ ಪರ ಇದ್ದರು. ಹೀಗಾಗಿ ನಾನು ಆ ವ್ಯಕ್ತಿ ಪರ ಬೆಂಬಲ ಕೊಡೋಕೆ ಬಂದಿದ್ದೀನಿ. ಹಾಗೆ ಕೆಲ ಸ್ನೇಹಿತರು ಇದ್ದಾರೆ. ಅವರ ಪರವೂ ನಿಲ್ಲುತ್ತೇನೆ ಎಂದು ತಿಳಿಸಿದರು.

ನನಗೆ ಎಲ್ಲ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಆಗಲ್ಲ. ಪಕ್ಷ ಅಂತಾ ಇಲ್ಲಿಗೆ ಬಂದಿಲ್ಲ, ವ್ಯಕ್ತಿಯ ಕಾಳಜಿಗೆ ಬಂದಿದ್ದೇನೆ. ಹಣಕ್ಕಾಗಿ ನಾನು ಚುನಾವಣಾ ಪ್ರಚಾರ ಮಾಡುತ್ತಿಲ್ಲ. ಸಿಎಂ ಬೊಮ್ಮಾಯಿ ಅವರಿಗೆ ಮಾತ್ರ ನನ್ನ ಬೆಂಬಲ. ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ನಾನು ಯಾವುದೇ ಕಾರಣಕ್ಕೂ ರಾಜಕೀಯ ಪ್ರವೇಶ ಮಾಡುವುದಿಲ್ಲ. ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುವುದು ಸಾಕಷ್ಟು ಇದೆ ಎಂದರು.