ಏ. 9ರಂದು ಬಂಡೀಪುರಕ್ಕೆ ಮೋದಿ ಭೇಟಿ – ಹೋಂ ಸ್ಟೇ, ರೆಸಾರ್ಟ್ ಬಂದ್…

51
firstsuddi

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 9ರಂದು ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಿ ಸಫಾರಿ ನಡೆಸಲಿದ್ದಾರೆ. ಈ ಹಿನ್ನಲೆ ಬಂಡೀಪುರ ವ್ಯಾಪ್ತಿಯ ಎಲ್ಲಾ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್‌ಗಳನ್ನು ಬಂದ್ ಮಾಡಲಾಗುತ್ತಿದೆ.

ಈ ಸಂಬಂಧ ಸುತ್ತೋಲೆ ಹೊರಡಿಸಿದ ಚಾಮರಾಜನಗರ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅವರು, ರಸ್ತೆ ನಿರ್ವಹಣೆ, ಪೂರ್ವ ಸಿದ್ದತೆ, ಹಾಗೂ ಭದ್ರತೆ ದೃಷ್ಟಿಯಿಂದ ಸಾರ್ವಜನಿಕರಿಗೆ ನಿಷೇಧಿಸಲಾಗಿದೆ. ಅಲ್ಲದೆ ಬಂಡೀಪುರ ವ್ಯಾಪ್ತಿಯ ಎಲ್ಲ ಹೋಂ ಸ್ಟೇಗಳು, ರೆಸಾರ್ಟ್ ಗಳನ್ನು ಬಂದ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಏಪ್ರಿಲ್ 9 ರಾಷ್ಟ್ರೀಯ ಹುಲಿ ದಿನ. ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು, ಸಫಾರಿ ನಡೆಸಲಿದ್ದಾರೆ. ಮೈಸೂರಿನಲ್ಲಿ 3 ದಿನಗಳ ಮೆಗಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇತ್ತೀಚಿನ ಹುಲಿ ಗಣತಿ ವರದಿ, ಹುಲಿ ಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ, ಮತ್ತು ನಾಣ್ಯ ಸ್ಮರಣಿಕೆಯನ್ನು ಮೈಸೂರಿನಲ್ಲಿ ಬಿಡುಗಡೆ ಮಾಡಲಿದ್ದಾರೆ.