ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ; ಜಮೀರ್ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾಗೊಳಿಸಿದ ಹೈಕೋರ್ಟ್.

159
firstsuddi

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಹೈಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ಜಮೀರ್ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಇಂದು ವಜಾಗೊಳಿಸಿದೆ.

ಸುಮಾರು 80.44 ಕೋಟಿ ರೂಪಾಯಿ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳವು ಪ್ರಕರಣ ದಾಖಲಿಸಿತ್ತು. ಪ್ರಕರಣದ ತನಿಖೆಗೆ ತಡೆ ನೀಡಬೇಕು ಎಂದು ಕೋರಿ ಜಮೀರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 1ರಂದು ಪೂರ್ಣಗೊಳಿಸಿದ್ದ ಪೀಠ, ಆದೇಶವನ್ನು ಕಾಯ್ದಿರಿಸಿತ್ತು.

ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜಮೀರ್ ಅಹ್ಮದ್ ಮನೆಯ ಮೇಲೆ ದಾಳಿ ನಡೆಸಿದ್ದ ಎಸಿಬಿ, 2022ರ ಮೇ ತಿಂಗಳಲ್ಲಿ ಎಫ್ಐಆರ್ ದಾಖಲಿಸಿತ್ತು. ಜಮೀರ್, ಆದಾಯ ಮೀರಿ 80 ಕೋಟಿಗೂ ಹೆಚ್ಚು ಆಸ್ತಿ ಗಳಿಸಿರುವ ಅಂಶ ದಾಳಿ ವೇಳೆ ಪತ್ತೆಯಾಗಿದೆ ಎಂದು ಎಸಿಬಿ ಆರೋಪಿಸಿತ್ತು.