ಆನೆ ದಾಳಿಗೆ ಯುವತಿ ಬಲಿ…

69
firstsuddi

ದಾವಣಗೆರೆ: ಆನೆ ದಾಳಿಗೆ ಯುವತಿ ಬಲಿಯಾಗಿರುವ ಘಟನೆ ಚನ್ನಗಿರಿಯ ಸೋಮ್ಲಾಪುರ ಗ್ರಾಮದಲ್ಲಿ ನಡೆದಿದೆ. ಕವನ (17) ಮೃತ ಯುವತಿ ಎಂದು ತಿಳಿದುಬಂದಿದೆ.

ಇಂದು ಮುಂಜಾನೆ ತಾಯಿ ಮಂಜುಳಾ (42) ಅವರ ಜೊತೆಯಲ್ಲಿ ಕವನ ಜಮೀನಿಗೆ ತೆರಳಿದ್ದಳು. ಜಮೀನಿನಲ್ಲಿ ಅವರೆಕಾಯಿ ಬಿಡಿಸುವ ವೇಳೆ ತಾಯಿ ಹಾಗೂ ಮಗಳ ಮೇಲೆ ಆನೆ ದಾಳಿ ನಡೆಸಿದೆ. ಗಂಭೀರವಾಗಿ ಗಾಯಗೊಂಡ ಕವನಳನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾಳೆ.

ಘಟನೆಯಲ್ಲಿ ಯುವತಿಯ ತಾಯಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶವಗಾರದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.