ಮುಂಬೈ: ಮೊಬೈಲ್ ಫೋನ್ ಬಳಸಲು ಅನುಮತಿಸದಿದ್ದಕ್ಕಾಗಿ ಬೇಸರಗೊಂಡ 15 ವರ್ಷದ ಬಾಲಕಿ ಏಳು ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ.
ಪಶ್ಚಿಮ ಉಪನಗರದ ಮಾಲ್ವಾನಿ ಪ್ರದೇಶದಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಘಟನೆ ಕುರಿತು ಅಧಿಕಾರಿಯೊಬ್ಬರು ಮಾತನಾಡಿ, ಬಾಲಕಿಯ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಬಾಲಕಿಯ ಕುಟುಂಬಸ್ಥರು ಆಕೆಯ ಮೊಬೈಲ್ ಫೋನ್ ಅನ್ನು ಕಿತ್ತುಕೊಂಡಿದ್ದರಿಂದ ಬೇಸರಗೊಂಡಿದ್ದಳು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.










