ರಾಜಕೀಯ ನಿವೃತ್ತಿ ಘೋಷಿಸಿದ ಶ್ರೀನಿವಾಸ್ ಪ್ರಸಾದ್.

72
firstsuddi

ಚಾಮರಾಜನಗರ : ಕೇಂದ್ರದ ಮಾಜಿ ಸಚಿವ, ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ಗುಂಡ್ಲುಪೇಟೆಯಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಇದು ನನ್ನ ರಾಜಕೀಯ ಜೀವನದ ಕೊನೆ ಚುನಾವಣೆಯಾಗಿದೆ. ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧೆ ಮಾಡಲ್ಲ. ನನಗೆ ರಾಜಕೀಯ ಸಾಕಾಗಿದೆ ಎಂದರು.

2013ರ ವಿಧಾನಸಭೆ ಚುನಾವಣೆ ತನ್ನ ಕೊನೆಯ ಚುನಾವಣೆ ಎಂದು ಈ ಹಿಂದೆ ಶ್ರೀನಿವಾಸ್ ಪ್ರಸಾದ್ ಅವರು ಘೋಷಿಸಿದ್ದರು. ಆದರೆ 2016ರಲ್ಲಿ ಅಂದಿನ ಸಿಎಂ ಸಿದ್ದರಾಮಯ್ಯ ಅವರು, ಕಂದಾಯ ಸಚಿವ ಸ್ಥಾನದಿಂದ ಕೈಬಿಟ್ಟಾಗ ಅವರು ಕಾಂಗ್ರೆಸ್ ಗೆ ವಿದಾಯ ಹೇಳಿ ಬಿಜೆಪಿ ಸೇರಿದ್ದರು.