ನಟಿ ಮಾನ್ವಿತಾ ಕಾಮತ್ ತಾಯಿ ನಿಧನ…

67
firstsuddi

ನಟಿ ಮಾನ್ವಿತಾ ಕಾಮತ್ ಅವರ ತಾಯಿ ಸುಜಾತಾ ಇಂದು ನಿಧನರಾಗಿದ್ದಾರೆ.

ನಟಿ ಮಾನ್ವಿತಾ ಕಾಮತ್ ತಾಯಿ ಸುಜಾತಾ ಅವರು ಕಳೆದ ಒಂದು ವರ್ಷದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಅವರಿಗೆ ಕಿಡ್ನಿ ಕಸಿ ಮಾಡಿಸಲಾಗಿತ್ತು ಎನ್ನಲಾಗಿದೆ. ಇದಲ್ಲದೆ ಅವರಿಗೆ ಎರಡು ಬಾರಿ ಹೃದಯಾಘಾತ ಆಗಿತ್ತು. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಸುಜಾತಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಸುಜಾತಾ ಕಾಮತ್ ಅವರಿಗೆ ಅನಾರೋಗ್ಯ ಉಂಟಾದಾಗ ಸೋನು ಸೂದ್ ಸಹಾಯ ಮಾಡಿದ್ದರು. ಈ ಬಗ್ಗೆ ಟ್ವೀಟ್ ಮಾಡಿದ್ದ ಮಾನ್ವಿತಾ ಕಾಮತ್, ಸೋನು ಸೂದ್ ಅವರ ಜತೆ ಮಾತನಾಡಿದೆ. ನನ್ನ ತಾಯಿಗೆ ಅವರು ಮಾಡಿದ ಸಹಾಯಕ್ಕೆ ಧನ್ಯವಾದ ಹೇಳಿದೆ. ನೀವು ನಿಜವಾದ ಹೀರೋ ಸರ್. ಎಲ್ಲದಕ್ಕೂ ಧನ್ಯವಾದ. ನಮ್ಮ ಸಂಕಷ್ಟದಲ್ಲಿ ಏಂಜಲ್ ರೀತಿ ಬಂದಿರಿ. ನಿಮ್ಮಿಂದಾಗಿ ನನ್ನ ತಾಯಿ ಇಂದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಾನ್ವಿತಾ ಬರೆದುಕೊಂಡಿದ್ದರು.

2015ರಲ್ಲಿ ತೆರೆಗೆ ಬಂದ ‘ಕೆಂಡಸಂಪಿಗೆ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ಮಾನ್ವಿತಾ ಕಾಮತ್ ನಂತರ ಹಲವು ಚಿತ್ರಗಳಲ್ಲಿ ಅವರು ನಟಿಸಿದರು. ‘ಟಗರು’ ಚಿತ್ರದಲ್ಲಿ ಮಾನ್ವಿತಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ಎರಡು ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ.