ಭೀಕರ ರಸ್ತೆ ಅಪಘಾತ – ಮಗು ಸೇರಿ ನಾಲ್ವರು ಸಾವು…

73
firstsuddi

ಕಡಬ: ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಟ್ಟಣ ಸಮೀಪದ ಬಿಳಿನೆಲೆ ಎಂಬಲ್ಲಿ ನಡೆದಿದೆ.

ಕಾರು ಹಾಗೂ ತೂಫಾನ್ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮಗು, ಮಹಿಳೆ ಹಾಗೂ ಇಬ್ಬರು ಪುರುಷರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರು ಬೇಲೂರಿನಿಂದ ಕುಕ್ಕೆ ಸುಬ್ರಹ್ಮಣ್ಯದ ಕಡೆಗೆ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ತೂಫಾನ್ ವಾಹನ ಹಾಸನ ಮೂಲದ್ದು ಎನ್ನಲಾಗಿದೆ. ತೂಫಾನ್​​ನಲ್ಲಿ ಪ್ರಯಾಣಿಸುತ್ತಿದ್ದವರಿಗೂ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.